ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯಲ್ಲಿ 30 ವರ್ಷದ ಮಹಿಳೆಯ ಮೇಲೆ ನೆರೆಮನಿಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ನಂತರ, ಆಕೆಯ ಮಕ್ಕಳ ಎದುರೇ ಆಸಿಡ್ ಸುರಿದಿರುವ ಘಟನೆ ಬೆಳಕಿಗೆ ಬಂದಿದೆ.
ಗಂಡನ ಗೈರ್ ಹಾಜರಿಯಲ್ಲಿ ಮಹಿಳೆ ಮೇಲೆ ದಾಳಿ
ಸಂತ್ರಸ್ತೆಯ ಗಂಡ ಮನೆಯಲ್ಲಿ ಇಲ್ಲದ ಸಂದರ್ಭ, ಆರೋಪಿ ಆಕೆಯ ಮನೆಗೆ ಪ್ರವೇಶಿಸಿದ್ದನ್ನು ನೋಡಿ ಮಹಿಳೆ ಕೋಪಗೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ವಾಗ್ವಾದ ನಡೆಯುತ್ತಿದ್ದಂತೆ, ಹಠಾತ್ತನೆ ಆರೋಪಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.
ಅತ್ಯಾಚಾರದ ನಂತರ ಆಸಿಡ್ ದಾಳಿ
ಅತ್ಯಾಚಾರ ಎಸಗಿದ ಆರೋಪಿ, ಅಲ್ಲಿಂದ ಪಾರಾಗುವ ಮೊದಲು ಮಹಿಳೆಯ ಮೇಲೆ ಏನೋ ರಾಸಾಯನಿಕ ದ್ರವ ಸುರಿದು, ಆಕೆಯ ಕೈಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿದ ಪರಿಸ್ಥಿತಿಯಲ್ಲೇ ತೊಲಗಿದ್ದಾನೆ.
ಪೊಲೀಸರ ತನಿಖೆ ಆರಂಭ
ಘಟನೆ ಬಗ್ಗೆ ಮಾಹಿತಿ ಪಡೆದ ಕಚಾರ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲು ಶೋಧ ನಡೆಸುತ್ತಿದ್ದಾರೆ. ಘಟನೆಯು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಮೂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…