Latest

28ನೇ ವಯಸ್ಸಿಗೆ 9 ಮಕ್ಕಳನ್ನು ಹೆತ್ತ ಮಹಿಳೆ; 12 ವರ್ಷ ನಿರಂತರ ತಾಯಿಯಾದ ಕಥೆ!

ಮದುವೆಯಾದ ಮಹಿಳೆಯರಿಗೆ ತಾಯಿಯಾಗೋದು ಅಂದ್ರೆ ಸಂತಸದ ಕ್ಷಣ. ಹಾಗಾಗಿ ಕೆಲವು ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾಡಿ ಕುಟುಂಬ ನಿರ್ವಹಣೆಯತ್ತ ಮುಖ ಮಾಡುತ್ತಾರೆ. ಆದರೆ ಇನ್ನು ಕೆಲವರು ಮಕ್ಕಳಿರಲವ್ವಾ ಮನೆ ತುಂಬಾ ಎಂದು ಮಕ್ಕಳು ಮಾಡುತ್ತಾ ಕೂರುತ್ತಾರೆ. ಅಂತಹದೇ ಸುದ್ದಿಯೊಂದು ಇಲ್ಲಿದೆ. ಅಂದಹಾಗೆಯೇ ಈ ಮಹಿಳೆ 12 ವರ್ಷ ನಿರಂತರ ತಾಯ್ತನ ಪಡೆಯುತ್ತಲೇ ಬಂದಿದ್ದಾಳೆ. ಆದರೀಗ ಈ ದಂಪತಿಗೆ ಮಕ್ಕಳೆಷ್ಟು ಗೊತ್ತಾ?
ಈಕೆಯ ಹೆಸರು ಡೂಕ್​. ಲಾಸ್​ ವೇಗಸ್​ ಮೂಲದ ಈಕೆಗೆ 39 ವರ್ಷ. ಡೂಕ್​ 17 ವರ್ಷದವಳಾಗಿದ್ದಾಗ ಮೊದಲ ಬಾರಿಗೆ ತಾಯಿಯಾಗಿದ್ದಳು. 2001ರಿಂದ ಪ್ರಾರಂಭಿಸಿ 2012ರವರೆಗೆ ನಿರಂತರವಾಗಿ ಗರ್ಭವತಿಯಾಗುವ ಮೂಲಕ ಡೂಕ್​ ಮಕ್ಕಳನ್ನು ಪಡೆಯುತ್ತಾ ಬಂದಿದ್ದಾಳೆ. ಸದ್ಯ ಡೂಕ್​ 23 ವರ್ಷದಿಂದ ತನ್ನ ಮಕ್ಕಳು ಮತ್ತು ಗಂಡನೊಂದಿಗೆ ಸಂತಸದ ಜೀವನ ನಡೆಸುತ್ತಿದ್ದಾಳೆ. ಡೂಕ್​ ಈ ವಿಚಾರವನ್ನು ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದು, 9 ಮಕ್ಕಳನ್ನು ಹೊಂದಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ಅಂದಹಾಗೆಯೇ ಡೂಕ್​ಗೆ 10 ವರ್ಷದ ಮಗುವಿನಂದ ಹಿಡಿದು 21 ವರ್ಷ ದವರೆಗಿನ ಮಕ್ಕಳನ್ನು ಹೊಂದಿದ್ದಾಳೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

23 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

23 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

23 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

23 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

23 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

23 hours ago