ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.
ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮೊದಲ ಬಾರಿಗೆ ಐಸ್ ಕ್ರೀಮ್ ಅಂಗಡಿ ತೆರೆದ ಎನ್. ವಿಶಾಲಾಕ್ಷಿ ಅವರು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹ್ಯಾಂಗ್ಯೋ ಕಂಪನಿಯ ಸಹಾಯಹಸ್ತದಿಂದ ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್ ಕ್ಯಾಂಡಿ, ಕುಲ್ಫಿ ಐಸ್, ಕೋನ್ ಐಸ್, ಕಪ್ ಐಸ್ ಇನ್ನಿತರೆ ಎಲ್ಲಾ ತರಹದ ಐಸ್ ಕ್ರೀಮ್ ಉತ್ಪನ್ನಗಳನ್ನು ನೇರವಾಗಿ ಪಡೆದು, ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರು, ಮಕ್ಕಳು ಹಾಗೂ ಯುವಕರು ಇದೀಗ ಮುಗಿಬಿದ್ದು, ತಂಪು ಪಾನೀಯಗಳು ಹಾಗೂ ಐಸ್ ಕ್ರೀಮ್ ಗಳ ಮೊರೆ ಹೋಗುತ್ತಿದ್ದಾರೆ.
ಇದುವರೆಗೂ ಬಿಡುಗಡೆಯಾದ ಕಂತುಗಳ ಹಣವನ್ನು ಬ್ಯಾಂಕ್ ಖಾತೆಯಲ್ಲೇ ಉಳಿಸಿ, ಅವರ ಪತಿ ಎನ್. ಬಸವರಾಜ ಅವರ ಸಹಕಾರದೊಂದಿಗೆ ಈ ಉದ್ಯಮವನ್ನು ಆರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಉಚಿತ ಭಾಗ್ಯವು ನಮ್ಮ ಬದುಕಿಗೆ ವರದಾನವಾಗಿದೆ, ಅವರ ಹೊಟ್ಟೆ ನೂರಾರು ಕಾಲ ತಣ್ಣಗಿರಲಿ ಎಂದು ಸ್ಮರಿಸಿ, ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ ಕುಟುಂಬದ ಯಜಮಾನಿ ಮಹಿಳೆಗೆ ಆರ್ಥಿಕ ಸ್ವಾವಲಂಬನೆ ನೀಡಲು ಪ್ರತಿ ತಿಂಗಳು ನೇರವಾಗಿ ₹2,000 ಸಹಾಯಧನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.
ವರದಿ:- ಮಣಿಕಂಠ. ಬಿ
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…