ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಕಾನುಬದ್ಲು ಬೊಮ್ಮನಕೆರೆಯ ನಿವಾಸಿ ದೀಪಾಲಿ ಗುರು ಗೊಂಡ (22) ಎಂದು ಗುರುತಿಸಲಾಗಿದೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆದಿದ್ದ ಅವರು ಕಳೆದ ಸುಮಾರು ಏಳು ತಿಂಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು.
ಲಭ್ಯ ಮಾಹಿತಿಯ ಪ್ರಕಾರ, ದೀಪಾಲಿ ಅವರು ತಮ್ಮ ಸಹೋದ್ಯೋಗಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ನೇಹಿತರೊಂದಿಗೆ ಟಿಟಿ ವಾಹನದಲ್ಲಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಕೆ.ಆರ್. ಪುರಂ ಸಮೀಪ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು.
ಈ ವೇಳೆ ಕೆಲವು ಪ್ರಯಾಣಿಕರು ವಾಹನದಿಂದ ಕೆಳಗಿಳಿದಿದ್ದರೆ, ಕೊನೆಯ ಹಂತದಲ್ಲಿ ಮೂವರು ವಾಹನದಲ್ಲೇ ಉಳಿದಿದ್ದರು ಎನ್ನಲಾಗಿದೆ. ಅದೇ ಸಮಯದಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಉರುಳಿ ಬಿದ್ದಿದೆ.
ಅಪಘಾತದ ತೀವ್ರತೆಗೆ ದೀಪಾಲಿ ವಾಹನದೊಳಗೆ ಸಿಲುಕಿಕೊಂಡು ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ಬಳಿಕ ಕೆಲಕಾಲ ಆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಸಹ ಅಡಚಣೆ ಎದುರಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
ದೀಪಾಲಿ ಅವರ ಅಕಾಲಿಕ ನಿಧನದಿಂದ ಕುಟುಂಬದವರು, ಬಂಧು-ಬಳಗ ಹಾಗೂ ಸ್ನೇಹಿತರಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…