ಬಿಹಾರದ ಬೆಟ್ಟಿಯಾ ಗ್ರಾಮದ ಯುವತಿ ಸಂಪೂರ್ಣ ಗ್ರಾಮದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪ್ರಿಯಕರನನ್ನು ಭೇಟಿಯಾಗುತ್ತಿದ್ದಳೆ. ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸುತ್ತಿದ್ದ ಟ್ರಾನ್ಸ್‌ಫಾರ್ಮರ್ ಬಳಿ ಬಂದು ಪ್ರೇಮಿಯನ್ನು ಭೇಟಿ ಯಾಗಲು ಕಾಯುತ್ತಿದ್ದಳು. ಪ್ರಿಯಕರ ಬಂದು ಮೊದಲು ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ಎಬಿ (ಏರ್ ಬ್ರೇಕ್ ಸ್ವಿಚ್) ಸ್ವಿಚ್ ಕೆಳಗೆ ಬೀಳಿಸುತ್ತಿದ್ದನು. ಇದರಿಂದಾಗಿ ಇಡೀ ಗ್ರಾಮದ ದೀಪಗಳು ಆಫ್ ಆಗುತ್ತಿದ್ದವು. ಆಗ ಇಬ್ಬರೂ ರಾತ್ರಿಯ ಕತ್ತಲಲ್ಲಿ ಭೇಟಿಯಾಗುತ್ತಿದ್ದರು. ನಂತರ ಪ್ರಿಯಕರ ಮರಳಿ ಹೋದ ನಂತರ ಯುವತಿ ಟ್ರಾನ್ಸ್‌ಫಾರ್ಮರ್ ಸ್ವಿಚ್ ಹಾಕುತ್ತಿದ್ದಳು.
ಗ್ರಾಮದಲ್ಲಿ ದಿನಾಲೂ ಕರೆಂಟ್ ಕಟ್ ಆಗುವ ಕಾರಣ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಜನರು ನಿಗಾ ವಹಿಸಿದ್ದರು. ರಾತ್ರಿ ಹೊತ್ತು ಗಸ್ತು ತಿರುಗುತ್ತಿದ್ದರು. ಇದೇ ವೇಳೆ ಜುಲೈ 14ರಂದು ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಲವರ್ಸ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ವಿಡಿಯೋದಲ್ಲಿ ಆರರಿಂದ ಏಳು ಮಂದಿ ಜೋಡಿಯನ್ನು ಸುತ್ತುವರಿದಿದ್ದಾರೆ. ಎಲ್ಲರೂ ಸೇರಿ ಹುಡುಗನಿಗೆ ಬೆಲ್ಟ್‌ನಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಯುವತಿ ತನ್ನ ಪ್ರಿಯಕರನನ್ನು ಥಳಿಸುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಜನರನ್ನು ಹೊಡೆದಿದ್ದಾಳೆ. ಥಳಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿದೆ. ಇದರಲ್ಲಿ ಕೆಲವರು ಯುವಕನಿಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ನೌತಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ಯುವತಿಯ ಪ್ರೇಮಿ ಆಕೆಯ ಗ್ರಾಮಕ್ಕೆ ಬಂದು ಆಕೆಯನ್ನು ಥಳಿಸಿದವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು, ವೀಡಿಯೋ ಆಧರಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಪ್ರಿಯಕರ ಮತ್ತು ಗೆಳತಿಯ ಕುಟುಂಬಗಳ ನಡುವೆ ಸಮಸ್ಯೆ ಇತ್ಯರ್ಥವಾಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆ ಯಾಗಲಿದ್ದಾರೆ ಎಂದು ಗೆಳತಿ ಮತ್ತು ಗೆಳೆಯನ ಸಂಬಂಧಿಕರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ನೌತನ್ ಪೊಲೀಸ್ ಠಾಣೆಯ ಮುಖ್ಯಸ್ಥ ಖಾಲಿದ್ ಅಖ್ತರ್, ಈ ವಿಷಯವು ಪ್ರೇಮ ಸಂಬಂಧವಾಗಿದೆ. ಹೀಗಾಗಿ ಸೂಕ್ಷ್ಮವಾಗಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…