Latest

ಮದರಸಾದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ: ಪೋಷಕರ ಆಕ್ರೋಶ

ಬೆಂಗಳೂರು: ಶಿಕ್ಷಣ ನೀಡಬೇಕಾದ ಸ್ಥಳದಲ್ಲಿ ಮಕ್ಕಳ ಮೇಲಿನ ಕ್ರೌರ್ಯ ನಡೀತಿದೆಯೆಂಬ ಆಘಾತಕಾರಿ ಘಟನೆ ಹೆಗಡೆನಗರದ ಮದರಸಾದಲ್ಲಿ ಬೆಳಕಿಗೆ ಬಂದಿದೆ. ಇಲ್ಲೊಬ್ಬ ವ್ಯಕ್ತಿ, ಶಿಸ್ತಿನ ಹೆಸರಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದರಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಕ್ರೂರತೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮದರಸಾದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ನಡೆದಿರುವುದು ಹೊಸದಲ್ಲ, ಆದರೆ ಈ ಘಟನೆಯ ವಿಡಿಯೋ ಹೊರಬಂದ ಕಾರಣದಿಂದಾಗಿ ಇಡೀ ನಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಯು ಬಾಲಕಿಯರನ್ನು ಕಚೇರಿಗೆ ಕರೆಸಿಕೊಂಡು ಮನಬಂದಂತೆ ಹೊಡೆದಿದ್ದು, ಅವರ ಖಾಸಗಿ ಅಂಗಾಂಗಗಳಿಗೆ ಸ್ಪರ್ಶಿಸುವ ಮೂಲಕ ಅಮಾನವೀಯ ವರ್ತನೆ ಮೆರೆದಿರುವುದಾಗಿ ಆರೋಪ ಕೇಳಿಬಂದಿದೆ.

ಪೋಷಕರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
ಈ ಘಟನೆ ತಿಳಿದ ತಕ್ಷಣ, ಶೋಕಕ್ಕೀಡಾದ ಪೋಷಕರು ಮದರಸಾ ಎದುರು ಸೇರಿ ನ್ಯಾಯಕ್ಕೆ ಒತ್ತಾಯಿಸಿದರು. ಪೀಡಿತ ಬಾಲಕಿ ಹೇಳುವ ಪ್ರಕಾರ, ಈ ಮದರಸಾದಲ್ಲಿ ಕ್ಷುಲ್ಲಕ ಕಾರಣಗಳಿಗೆ ಮಕ್ಕಳ ಮೇಲೆ ಹಲ್ಲೆ ಮಾಡುವುದು ಸಾಮಾನ್ಯ. ಜೋರಾಗಿ ಮಾತನಾಡಿದರೂ ಸಹ ಶಿಕ್ಷೆ ಅನುಭವಿಸಬೇಕಾಗುತ್ತದೆಯಂತೆ. ಅಲ್ಲದೇ, ಊಟ, ನೀರು, ನೈರ್ಮಲ್ಯಗಳ ಸಮಸ್ಯೆಯೂ ಇದೆ ಎಂದು ಆರೋಪಿಸಲಾಗಿದೆ.

ಪೋಷಕರು ಈ ಸಿಸಿ ಟೀವಿ ದೃಶ್ಯಗಳನ್ನು ಬೆಂಗಳೂರಿನ ಪೊಲೀಸ್ ಕಮಿಷನರ್, ಎಸಿಪಿ, ಡಿಸಿಪಿ ಅವರಿಗೆ ಕಳುಹಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಕ್ರಮ ಕೈಗೊಳ್ಳಬೇಕಾದ ಅಗತ್ಯತೆಯಿದೆ, ಹಾಗೆಯೇ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಕ್ರಮ ಜರುಗಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago