Categories: CorruptionLatest

ಜೈಪುರದಲ್ಲಿ ಲಂಚ ಪಡೆಯುತ್ತಿದ್ದ ಬೆಂಗಳೂರು ಪೊಲೀಸರು ಎಸಿಬಿ ಬಲೆಗೆ: ಎಚ್‌ಎಎಲ್ ಠಾಣೆಯ ಮೂವರ ಬಂಧನ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಸ್ವೀಕರಿಸುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಎಚ್‌ಎಎಲ್ ಠಾಣೆಯ ಪಿಎಸ್‌ಐ ಅನಿತಾ, ಹೆಡ್ ಕಾನ್‌ಸ್ಟೆಬಲ್ ಉಳುವಪ್ಪ ಹಾಗೂ ಕಾನ್‌ಸ್ಟೆಬಲ್ ಯತೀಶ್ ಬಂಧಿತ ಪೊಲೀಸರು. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯೊಬ್ಬರಿಂದ ಎರಡು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಇವರ ಮೇಲಿದೆ.

ಆರೋಪಿಗಳು ಬೇಡಿಕೆ ಇಟ್ಟಿದ್ದ ಹಣದಲ್ಲಿ ಮುಂಗಡವಾಗಿ 40 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಎಸಿಬಿ ಎಎಸ್‌ಪಿ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ.

ಪ್ರಕರಣ ಸಂಬಂಧ ಜೈಪುರ ಎಸಿಬಿ ಅಧಿಕಾರಿಗಳು ಬಂಧಿತ ಪೊಲೀಸರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಲಂಚ ಪ್ರಕರಣದಲ್ಲಿ ಬೆಂಗಳೂರು ಪೊಲೀಸರ ಬಂಧನದ ಕುರಿತು ರಾಜಸ್ಥಾನದ ಎಸಿಬಿ ಅಧಿಕಾರಿಗಳು ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಈ ಘಟನೆ ಬೆಂಗಳೂರು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದ್ದು, ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿಯೂ ಪರಿಶೀಲನೆ ಆರಂಭವಾಗಿದೆ. ಸದ್ಯ ಎಸಿಬಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಲಂಚ ಬೇಡಿಕೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago