Crime

ಶಹಾಪುರದಲ್ಲಿ ಬಾಲಕಿಯರ ಮಾನಭಂಗ ಆರೋಪ.!: ಶಾಲೆಯ ಪ್ರಾಂಶುಪಾಲರು ಸೇರಿದಂತೆ ಎಂಟು ಮಂದಿ ವಿರುದ್ಧ ಪೋಕ್ಸೊ ಪ್ರಕರಣ

ಶಹಾಪುರ (ಜುಲೈ 9): ಥಾಣೆ ಜಿಲ್ಲೆಯ ಶಹಾಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ 5ರಿಂದ 10ನೇ ತರಗತಿಯ ಬಾಲಕಿಯರ ಮೇಲೆ ಅಸಭ್ಯತೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಘಟನೆ ರಾಜ್ಯದೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರ ಪೋಷಕರ ನೀಡಿದ ದೂರಿನ ಮೇರೆಗೆ, ಶಾಲೆಯ ಪ್ರಾಂಶುಪಾಲರು, ನಾಲ್ವರು ಶಿಕ್ಷಕರು, ಮಹಿಳಾ ಸಹಾಯಕರು ಮತ್ತು ಟ್ರಸ್ಟ್‌ನ ಇಬ್ಬರು ಸದಸ್ಯರು ಸೇರಿದಂತೆ ಒಟ್ಟು ಎಂಟು ಮಂದಿ ವಿರುದ್ಧ ಶಹಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವಿವಾದ ಮಂಗಳವಾರ ಬೆಳಕಿಗೆ ಬಂದಿದ್ದು, ಆರ್‌ಎಸ್ ದಮಾನಿ ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದ ಹಿನ್ನೆಲೆಯಲ್ಲೇ ಶಾಲಾ ಆಡಳಿತವು ಶಂಕಿತ ಕ್ರಮ ಕೈಗೊಂಡಿದೆ. ಶಾಲಾ ಸಿಬ್ಬಂದಿ, ಪಿರಿಯಡ್ಸ್ ಆಗಿರುವ ವಿದ್ಯಾರ್ಥಿನಿಯರ ಗುರುತಿಸಬೇಕೆಂಬ ಕಾರಣ ನೀಡಿ, 5ರಿಂದ 10ನೇ ತರಗತಿಯ ಎಲ್ಲಾ ಬಾಲಕಿಯರನ್ನು ಶಾಲೆಯ ಕನ್ವೆನ್ಷನ್ ಹಾಲ್‌ಗೆ ಕರೆಸಿದ್ದಾರೆ. ನಂತರ ಶೌಚಾಲಯದ ರಕ್ತದ ಕಲೆಗಳ ಫೋಟೋಗಳನ್ನು ಪ್ರೊಜೆಕ್ಟರ್‌ನಲ್ಲಿ ತೋರಿಸಿ, ಪಿರಿಯಡ್ಸ್ ಆಗಿರುವವರು ಯಾರು ಎಂದು ಪ್ರಶ್ನಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರ ಬಳಿಕ, ವಿದ್ಯಾರ್ಥಿನಿಯರನ್ನು ಶೌಚಾಲಯಕ್ಕೆ ಒಬ್ಬೊಬ್ಬರಾಗಿ ಕರೆದೊಯ್ದು, ಖಾಸಗಿ ಅಂಗಾಂಗಗಳ ಪರಿಶೀಲನೆ ನಡೆಸಲಾಗಿದೆ ಎಂದು ಮಹಿಳಾ ಸಹಾಯಕರ ವಿರುದ್ಧ ಆಪಾದನೆ ಕೇಳಿಬಂದಿದೆ. ಈ ಮೂಲಕ ಬಾಲಕಿಯರ ಗೌರವ ಮತ್ತು ಖಾಸಗಿತನವನ್ನು ತುಳಿಯಲಾಗಿದೆ ಎಂಬ ಗಂಭೀರ ಆರೋಪ ಪೋಷಕರಿಂದ ಕೇಳಿಬಂದಿದೆ.

ಪೋಷಕರ ಆಕ್ರೋಶ ಹಿನ್ನೆಲೆ, ಶಹಾಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), ಸೆಕ್ಷನ್ 76 (ವಿವಸ್ತ್ರಗೊಳಿಸುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಬಲಪ್ರಯೋಗ) ಹಾಗೂ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿದೆ ಎಂಬ ವರದಿ ಬಂದಿಲ್ಲ.

ಶಹಾಪುರ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ, “ಪೂರ್ಣ ವಿಚಾರಣೆ ನಂತರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸಮಾಜದಲ್ಲಿಯೂ ಈ ಘಟನೆಯ ಬಗ್ಗೆ ತೀವ್ರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೋಷಕರು ಹಾಗೂ ಸಮಾಜದ ಮುಖಂಡರು ಶಾಲೆಯ ಮೇಲೆ ಕಾನೂನುನಿಷ್ಠವಾದ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಕ್ಕಳ ಭದ್ರತೆ ಪ್ರಶ್ನೆಗೆದುರಾಗಿದ್ದು, ಶಾಲಾ ನಿರ್ವಹಣೆಯ ಜವಾಬ್ದಾರಿತನದ ಬಗ್ಗೆ ಗಂಭೀರ ಚರ್ಚೆಗೆ ಆಧಾರ ನೀಡಿದೆ.

nazeer ahamad

Recent Posts

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

11 hours ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

6 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago