Categories: CrimeLatest

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರ ಪ್ರದೇಶದ ಸತ್ಯಸಾಯಿ ಜಿಲ್ಲೆಯ ಧನಂಜಯ ರೆಡ್ಡಿ (33) ಎಂದು ಗುರುತಿಸಲಾಗಿದೆ.

ಚಿತ್ರದುರ್ಗದ ಪ್ರಶಾಂತ್ ನಗರ ನಿವಾಸಿ ತಿಪ್ಪೇಸ್ವಾಮಿ ಅವರು ಶಿವಮೊಗ್ಗ ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಧನಂಜಯ ರೆಡ್ಡಿ ಅವರು ತಿಪ್ಪೇಸ್ವಾಮಿ ಅವರಿಗೆ ವಾಟ್ಸ್ಆ್ಯಪ್ ಕರೆ ಮಾಡಿ, ತಾನು ಬೆಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದಾನೆ.

ಇದೇ ವೇಳೆ, “ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಿಂದ ನಿಮ್ಮನ್ನು ಮುಕ್ತಗೊಳಿಸಲು ಹಾಗೂ ಬಿ-ರಿಪೋರ್ಟ್ ಸಲ್ಲಿಸಲು ಹಣ ನೀಡಬೇಕು” ಎಂದು ಆರೋಪಿಯು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಈ ಕುರಿತು ತಿಪ್ಪೇಸ್ವಾಮಿ ಅವರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, 66(D) ಐಟಿ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) 308(7) ಮತ್ತು 204 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಸಿಇಎನ್ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ್ ನೇತೃತ್ವದ ತಂಡ, ಎಎಸ್‌ಐ ಕಿರಣ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಸಂಗಮೇಶ್ ಮತ್ತು ಶರತ್ ಕುಮಾರ್ ಅವರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಆಂಧ್ರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ಸಿಇಎನ್ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅಭಿನಂದಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago