ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕ್ರೇನ್‌ನ್ನು ಕಳ್ಳತನ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಹಳಿಯಾಳ ತಾಲೂಕಿನ ಅಜಂಗಾವ ಗ್ರಾಮದ ರಘುನಾಥ ಕದಂ ಅವರ ಮಾಲಕತ್ವದ ಈ ಕ್ರೇನ್‌ನ್ನು ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ ಕಮಾಲಸಾಹೇಬ ಮುಲ್ಲಾ ಎಂಬಾತ ಕದಿದಿದ್ದಾನೆ. ಈ ಕ್ರೇನ್ ಬೆಲೆ ಸುಮಾರು 14 ಲಕ್ಷ ರೂಪಾಯಿಯಾಗಿದ್ದು, ಸಾಲಭಾರದ ಕಾರಣದಿಂದಾಗಿ ಆರೋಪಿಯು ಈ ಕೃತ್ಯಕ್ಕೆ ಮುಂದಾಗಿದ್ದನೆಂದು ತಿಳಿದುಬಂದಿದೆ.
ಪ್ರಾರಂಭದಲ್ಲಿ ಯಾವುದೇ ಸುಳಿವಿಲ್ಲದ ಈ ಪ್ರಕರಣದಲ್ಲಿ, ಪೊಲೀಸರು ಸಿಸಿಟಿವಿ ಕ್ಯಾಂಮೆರಾಗಳ ಸಹಾಯದಿಂದ ಆರೋಪಿಯ ಹಾದಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ಆಧಾರದಲ್ಲಿ ಆರೋಪಿ ಇರುವ ಸ್ಥಳವನ್ನು ಗುರುತಿಸಿ ಬಂಧಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ನೇತೃತ್ವದ ತಂಡ ಈ ಪ್ರಕರಣವನ್ನು ಯಶಸ್ವಿಯಾಗಿ
ಪಿಎಸ್‌ಐ ಎಂ.ಡಿ. ಪಾಟೀಲ ಹಾಗೂ ಸಿಬ್ಬಂದಿಗಳಾದ ಎಚ್.ಬಿ. ಐಹೊಳೆ, ಅಬ್ರಹಾರ್ ಪಾಟೀಲ, ಅಬ್ದುಲ ಕಾಕರ, ಚೆನ್ನಪ್ಪ ಬಳ್ಳೊಳ್ಳಿ, ಮಹಾಂತೇಶ ಮದ್ದಿನ, ಗಿರೀಶ ತಿಪ್ಪಣಷನವರ, ತಿಪ್ಪಣ್ಣ ಆಲೂರ ಹಾಗೂ ತಾಂತ್ರಿಕ ಸಿಬ್ಬಂದಿಗಳಾದ ಆರೀಫ್ ಗೋಲಂದಾಜ್ ಮತ್ತು ವಿಠ್ಠಲ ಡಂಗನವರ ಈ ಕಾರ್ಯಾಚರಣೆಯಲ್ಲಿ ಭಾಗಿ ಆಗಿದ್ದರು.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…