Latest

ವೈದ್ಯಕೀಯ ತಪಾಸಣೆ ವೇಳೆ ಆರೋಪಿ ಮೃತ್ಯು: ಕರ್ತವ್ಯ ನಿರ್ಲಕ್ಷ್ಯಕ್ಕೆ ಎಎಸ್‌ಐ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್

ಗದಗ: ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾದ ಆರೋಪಿ ಜಿಮ್ಸ್ ಕಟ್ಟಡದಿಂದ ಜಿಗಿದು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ನಿರ್ಲಕ್ಷ್ಯ ತೋರಿರುವುದು ಸಿಐಡಿ ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆ ಬ್ರಹ್ಮಪುರ ಪೊಲೀಸ್ ಠಾಣೆಯ ಎಎಸ್‌ಐ ಅಬ್ದುಲ್ ಖಾದರ್ (54), ಕಾನ್‌ಸ್ಟೇಬಲ್‌ಗಳಾದ ಹುಣಚಪ್ಪ ಮಲ್ಲಪ್ಪ (56) ಮತ್ತು ಕುಮಾರ ರಾಠೋಡ (22) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಘಟನೆ ಹಿನ್ನಲೆ

ಆಗಸ್ಟ್ 8ರಂದು ಬ್ರಹ್ಮಪುರ ಠಾಣೆ ಪೊಲೀಸರು 20 ವರ್ಷದ ಆರೋಪಿ ಸೋಹೇಬ್ ಅನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ವೈದ್ಯಕೀಯ ತಪಾಸಣೆಗಾಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಸಂದರ್ಭದಲ್ಲಿ, ಕೋವಿಡ್-19 ಪರೀಕ್ಷೆ ಸೇರಿದಂತೆ ಅನಿವಾರ್ಯ ತಪಾಸಣೆ ನಡೆಸುವ ಸಂದರ್ಭ ಆರೋಪಿ ಕೈಕೋಳವನ್ನು ಬಿಚ್ಚಲಾಗಿತ್ತು.

ಆರೋಪಿ ಅದೇ ಅವಕಾಶವನ್ನು ಬಳಸಿಕೊಂಡು ಪೊಲೀಸರ ವಶದಿಂದ ತಪ್ಪಿಸಿಕೊಂಡು ಓಡಿದನು. ತಕ್ಷಣವೇ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

ಸಿಐಡಿ ತನಿಖೆಯ ಪತ್ತೆ

ಪ್ರಕರಣದ ಗಂಭೀರತೆ ಪರಿಗಣಿಸಿ, ರಾಜ್ಯ ಸರ್ಕಾರವು ಸಿಐಡಿಗೆ ತನಿಖಾ ಹೊಣೆ ನೀಡಿತು. ಸಿಐಡಿ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷ್ಯಾಧಾರಗಳು ಸೇರಿದಂತೆ ಒಟ್ಟು 257 ಪುಟಗಳ ತನಿಖಾ ವರದಿ ಸಲ್ಲಿಸಿದರು.

ಇದರ ಪ್ರಕಾರ, ಆರೋಪಿಯನ್ನು ಪೂರ್ತಿಯಾಗಿ ತಮ್ಮ ವಶದಲ್ಲಿರಿಸದೇ, ನಿರ್ಲಕ್ಷ್ಯದಿಂದ ದೂರದಲ್ಲಿ ನಿಲ್ಲಿಸಿ ಬೇಜಾರಿಯ ವರ್ತನೆ ತೋರಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಎಎಸ್‌ಐ ಅಬ್ದುಲ್ ಖಾದರ್, ಕಾನ್‌ಸ್ಟೇಬಲ್‌ಗಳು ಹುಣಚಪ್ಪ ಮಲ್ಲಪ್ಪ ಮತ್ತು ಕುಮಾರ ರಾಠೋಡ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 225(ಎ), (ಬಿ) ಅಡಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣವು ಪೊಲೀಸರು ಕರ್ತವ್ಯ ನಿರ್ವಹಣೆಯಲ್ಲಿ ಎಷ್ಟು ಎಚ್ಚರಿಕೆಯಿಂದ ವರ್ತಿಸಬೇಕೆಂಬ ಪ್ರಶ್ನೆ ಎಬ್ಬಿಸಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಈಗ ಈ ಪ್ರಕರಣದ ಮುಂದಿನ ಹಂತಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago