Categories: Latest

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; ಮಾನ್ವಿಯ 3 ಸೈಬರ್ ಕೇಂದ್ರ ಸೀಜ್!

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ 200 ರಿಂದ 250 ರೂಪಾಯಿವರೆಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಮಾನ್ವಿಯ ಮೂರು ಸೈಬರ್ ಕೇಂದ್ರಗಳನ್ನು ಸೀಜ್​ ಮಾಡಲಾಗಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಪಾಸ್‌ವಾರ್ಡ್ (ರಹಸ್ಯ ಸಂಖ್ಯೆ) ದುರ್ಬಳಕೆ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಡಲು ಮಹಿಳೆಯರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮೂರು ಕಂಪ್ಯೂಟರ್ ಸೆಂಟರ್ ಮೇಲೆ‌ ದಾಳಿ ಮಾಡಿದ ಅಧಿಕಾರಿಗಳು, ಅವುಗಳನ್ನು ಸೀಜ್ ಮಾಡಿರುವ ಘಟನೆ ಜಿಲ್ಲೆಯ ಮಾನವಿಯಲ್ಲಿ ನಡೆದಿದೆ.
ಪ್ರತಿ ತಿಂಗಳು 2000 ಸಾವಿರ ರೂಪಾಯಿ ಹಣವನ್ನು ಕುಟುಂಬದ ಮನೆ ಯಜಮಾನಿಯ ಖಾತೆಗೆ ಜಮಾ ಮಾಡುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್​ ಸರ್ಕಾರ ಈ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಹಣ ಪಡೆಯಲು ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಮಹಿಳೆಯರು ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಸರ್ಕಾರ ಇತ್ತೀಚೆಗಷ್ಟೇ ಹೇಳಿತ್ತು. ಆದರೆ, ಇದರ ಹೆಸರಿನಲ್ಲಿ ಮಾನವಿಯ ಗ್ರಾಮ ಒನ್‌ ಕೇಂದ್ರದ ಪಾಸ್‌ವರ್ಡ್ ಅನ್ನು ಖಾಸಗಿ ಅಂಗಡಿಯಲ್ಲಿ ದುರ್ಬಳಕೆ ಮಾಡಿಕೊ೦ಡು ಒಂದು ಅರ್ಜಿಗೆ 200 ರೂ. ವಸೂಲಿ ಮಾಡುತ್ತಿದ್ದರು ಎಂಬ ದೂರು ಕೇಳಿ ಬಂದಿತ್ತು. ಈ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಮಾನವಿಯ ತಹಶೀಲ್ದಾರ್ ಎಲ್ ಡಿ ಚಂದ್ರಕಾಂತ ಅವರು ತಮ್ಮ ಸಿಬ್ಬಂದಿಯೊಂದಿಗೆ ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್ ಮೇಲೆ ದಾಳಿ ನಡೆಸಿ ಸೀಜ್ ಮಾಡಿದ್ದಾರೆ.
ದಾಳಿ ಬಳಿಕ ಮಾಹಿತಿ ನೀಡಿದ ತಹಶೀಲ್ದಾರ್ ಚಂದ್ರಕಾಂತ್, ಸರ್ಕಾರದ ಗ್ರಾಮ್ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಸದಾಪೂರು ಗ್ರಾಮದಲ್ಲಿ ಗ್ರಾಮ ಒನ್‌ ಕೇಂದ್ರ ಇದ್ದರೂ ಸಹ ಅದನ್ನು ಬಂದ್‌ ಮಾಡಿ ಮಾನವಿ ಲಕ್ಷ್ಮಿ ಕಂಪ್ಯೂಟರ್ ಕೇಂದ್ರದಲ್ಲಿ ಸರ್ಕಾರ ನೀಡಿದ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೇ ಫಲಾನುಭವಿ ಮಹಿಳೆಯಿಂದ ನೋಂದಣಿ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್​ನಲ್ಲಿ ಒಂದು ಅರ್ಜಿಗೆ 200 ರಿಂದ 250 ರೂಪಾಯಿವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ಕಂಪ್ಯೂಟರ್ ಸೆಂಟರ್ ಅಂಗಡಿ ಮಾಲೀಕರ ಮೇಲೆ ಪ್ರಕರಣ ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಈ ಬಗ್ಗೆ ಯಾರಾದರು ಅಸಡ್ಡೆ ತೋರಿದರೆ ಅಥವಾ ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago