Cinema

ಲಾಂಗ್ ಹಿಡಿದು ರೀಲ್ಸ್ ಮಾಡಿದ ನಟ ವಿನಯ್ ಗೌಡ ಮತ್ತು ರಜತ್ ಬಂಧನ

ಬೆಂಗಳೂರು: ‘ಬಿಗ್ ಬಾಸ್’ ಖ್ಯಾತಿಯ ನಟ ವಿನಯ್ ಗೌಡ ಮತ್ತು ರಜತ್‌ರನ್ನು ಮಾರಕಾಸ್ತ್ರ ಕಾಯ್ದೆಯಡಿಯಲ್ಲಿ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ನಟ ವಿನಯ್ ಗೌಡ ಹಾಗೂ ರಜತ್, ಲಾಂಗ್ ಹಿಡಿದು ರೀಲ್ಸ್ ಮಾಡಿದ್ದು, ಈ ಕುರಿತು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ವಿಚಾರಣೆಗಾಗಿ ಇವರಿಬ್ಬರೂ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.

ರಜತ್ ಕಿಶನ್ ಜೊತೆ ವಿನಯ್ ಗೌಡ ಈ ರೀಲ್ಸ್ ಮಾಡಿದ್ದಾರೆ. ರೀಲ್ಸ್‌ನಲ್ಲಿ ವಿನಯ್ ಗೌಡ, ಲಾಂಗ್ ಹಿಡಿದು, ಕೂಲಿಂಗ್ ಗ್ಲಾಸ್ ಧರಿಸಿ, ದರ್ಶನ್ ಅವರ ‘ಕರಿಯ’ ಸಿನಿಮಾದ ಶೈಲಿಯಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.

ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀತಿಯ ರೀಲ್ಸ್ ಮಾಡಿರುವುದು ಸಮಸ್ಯೆಗೆ ಕಾರಣವಾಗಿದೆ. ಈ ವಿಡಿಯೋವನ್ನು ‘ಬುಜ್ಜಿ’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಲಾಗಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago