Latest

ನಟಿ ರಮ್ಯಾ ಮೇಲೆ ಅಶ್ಲೀಲ ಮೆಸೇಜ್ ಕೇಸ್: ಯುವಜನರಲ್ಲಿ ಜವಾಬ್ದಾರಿ ಅಗತ್ಯವೆಂದು ನಟ ಪ್ರಜ್ವಲ್ ದೇವರಾಜ್ ಕಿಡಿ

ಬೆಂಗಳೂರು: ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ನಡೆದ ‘ಸು ಫ್ರಮ್ ಸೋ’ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಹಾಜರಾಗಿದ್ದ ಪ್ರಜ್ವಲ್, ಮಾಧ್ಯಮದೊಂದಿಗೆ ಮಾತನಾಡುತ್ತಾ, “ಯಾರು ಯಾರ ಫ್ಯಾನ್ ಆಗಿದ್ರೂ, ಅವರಿಗೆ ಮಿತಿಮೀರಿ ಅಭಿಮಾನ ತೋರಿಸಬಾರದು. ಜವಾಬ್ದಾರಿ ಸಹ ಅವಶ್ಯಕ. ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಹೆಣ್ಣುಮಕ್ಕಳಿಗೆ ಆಗುವ ಕಿರುಕುಳದ ವಿರುದ್ಧ ಸ್ಪಷ್ಟ ಸಂದೇಶವಿದೆ. ಆ ವಿಷಯವನ್ನು ಮನಗಂಡು, ಇಂದಿನ ಯುವಕರು ಪ್ರಬುದ್ಧವಾಗಿ ವರ್ತಿಸಬೇಕು,” ಎಂದು ಮನವೊಲಿಸಿದರು.

“ಧೈರ್ಯವಿದ್ದರೆ ಮುಂಚೆ ಬಂದು ನೇರವಾಗಿ ಮಾತನಾಡಲಿ. ಎಲ್ಲ ಚಿಕ್ಕ ಹುಡುಗರ ಕೈಯಲ್ಲೂ ಮೊಬೈಲ್ ಇದ್ದೀತು. ಆದರೆ, ಯಾರಿಗೂ ಗೊತ್ತಾಗಲ್ಲ ಅನ್ನೋ ಭಾವನೆಯಿಂದ ಅಶ್ಲೀಲ ಮೆಸೇಜ್ ಕಳಿಸುವುದನ್ನು ನ್ಯಾಯಸಮ್ಮತವಾಗಿ ಕಾನೂನು ಕಪ್ಪೆ ಮೇಲೆ ತರುವ ಅವಶ್ಯಕತೆ ಇದೆ,” ಎಂದು ಅವರು ಎಚ್ಚರಿಸಿದರು.

ಇದರ ಜೊತೆಗೆ ಪ್ರಜ್ವಲ್ ದೇವರಾಜ್ ತಮ್ಮ ಕುಟುಂಬಕ್ಕೂ ಇದೇ ರೀತಿಯ ಕಿರುಕುಳವಾಗಿದೆ ಎಂದು ಬಹಿರಂಗಪಡಿಸಿದರು. ತಮ್ಮ ಪತ್ನಿ ರಾಗಿಣಿ ದೇವರಾಜ್ ಅವರ ಸಹೋದರಿಗೆ ಅಪರಿಚಿತ ವ್ಯಕ್ತಿಯೊಬ್ಬ 280ಕ್ಕೂ ಹೆಚ್ಚು ಬಾರಿ ಫೋನ್ ಮಾಡಿರುವುದು, ಅಶ್ಲೀಲ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸಿರುವುದಾಗಿ ಅವರು ದೂರಿದ್ದಾರೆ.

ಈ ಸಂಬಂಧ ಅಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಕಾನೂನಾತ್ಮಕವಾಗಿ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಜ್ವಲ್ ಸ್ಪಷ್ಟಪಡಿಸಿದ್ದಾರೆ.

 

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

7 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

11 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

14 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

19 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago