Latest

ಸುಪ್ರೀಂ ತೀರ್ಪಿಗೆ ನಟಿ ರಮ್ಯಾ ಧ್ವನಿ: ದರ್ಶನ್ ಪ್ರಕರಣದಲ್ಲಿ ನ್ಯಾಯದ ಕಿರಣ!”

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಆರು ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್ ಆದೇಶದ ಮೇಲೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ಸುಪ್ರೀಂ ಕೋರ್ಟ್‌ನ ನಿರ್ಧಾರ ದೇಶದ ಜನರಿಗೆ ಭರವಸೆಯ ಬೆಳಕು ತಂದಿದೆ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಸಾಧ್ಯತೆ ಕಣ್ಮುಂದಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಜಾಮೀನು ನೀಡಿದ ಹೈಕೋರ್ಟ್ ಕ್ರಮ ಪ್ರಶ್ನಾರ್ಥಕ:
ಬೆಂಗಳೂರಿನ ಪೊಲೀಸರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಆರ್. ಮಹಾದೇವನ್ ನೇತೃತ್ವದ ಪೀಠ, ಜಾಮೀನು ನೀಡಿದ ಹೈಕೋರ್ಟ್ ಕ್ರಮದ ತೀಕ್ಷ್ಣ ವಿಮರ್ಶೆ ನಡೆಸಿದೆ.

“ಆದೇಶದ ಭಾಷೆ ಹಾಗೂ ತೀರ್ಮಾನ ಮಾಡುವ ಶೈಲಿ ನೋಡಿ, ನ್ಯಾಯಾಲಯವು ಈ ಪ್ರಕರಣವನ್ನು ನೇರವಾಗಿ ಖುಲಾಸೆಗೊಳಿಸಿರುವಂತಿದೆ” ಎಂದು ಸುಪ್ರೀಂ ಕೋರ್ಟ್ ತೀವ್ರ ಟೀಕೆ ಮಾಡಿದೆ.

ದಾಖಲೆಗಳ ಕುರಿತು ಗಂಭೀರ ಸಂದೇಹ:
ನ್ಯಾಯಪೀಠ, 2024ರ ಡಿಸೆಂಬರ್ 13ರಂದು ನೀಡಿದ್ದ ಹೈಕೋರ್ಟ್ ಆದೇಶದಲ್ಲಿ, “ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಏನೆಂದು ಪೂರಕ ದಾಖಲೆಗಳಿವೆ ಎಂಬುದನ್ನು ಸೂಚಿಸದೇ ಜಾಮೀನು ನೀಡಿರುವುದು ಗಮನಾರ್ಹ ದೋಷ” ಎಂದು ಹೇಳಿದೆ.

“ಇದು ಪ್ರಾಥಮಿಕ ವಿಚಾರಣಾ ಹಂತದಲ್ಲಿ ನ್ಯಾಯಾಂಗ ಶಕ್ತಿಯ ದುರುಪಯೋಗವಾಗಿದೆ” ಸುಪ್ರೀಂ ಕೋರ್ಟ್ ನೇರವಾಗಿ ಹೈಕೋರ್ಟ್ ತೀರ್ಪು ಶ್ರೇಷ್ಟ ನ್ಯಾಯತಾತ್ವಿಕತೆಯ ವಿರುದ್ಧ ಹೋಗಿದೆ ಎಂಬುದನ್ನು ಸ್ಪಷ್ಟಪಡಿಸಿದೆ.

ಈ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಪ್ರಕರಣ ಮುಂದಿನ ಹಂತಗಳಲ್ಲಿ ಮತ್ತಷ್ಟು ಕಾನೂನು ಗಂಭೀರತೆಗೆ ಒಳಪಡುವ ಸಾಧ್ಯತೆಯಿದೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago