ಮಾದಕ ವಸ್ತು ಸೇವನೆ ಸಂಬಂಧಿಸಿರುವ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಅವರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗುತ್ತಿದೆ. ಈ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಸಂಜನಾ, ಈ ಪ್ರಕರಣದಲ್ಲಿ ಆರೋಪಿಯಾಗಿದ್ದಳು. ಆದರೆ, ಹೈಕೋರ್ಟ್ನಲ್ಲಿ ಈ ಕೇಸ್ ರದ್ದು ಮಾಡಲಾಗಿತ್ತು, ಜೊತೆಗೆ ಕೊನೆಯ ತೀರ್ಪು ಕೂಡ ಬಂದಿತ್ತು.
ಆದ್ರೆ ಇದೀಗ, ಸಂಜನಾ ವಿರುದ್ಧದ ಈ ಕೇಸ್ ಹೈಕೋರ್ಟ್ನಲ್ಲಿ ರದ್ದುಮಾಡುವ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಪೊಲೀಸರು ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಈ ತಿಂಗಳ ಕೊನೆಯಲ್ಲಿ ಮೇಲ್ಮನವಿ ಸಲ್ಲಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.
ಹಾಗಾದರೆ, ಸಿಸಿಬಿ ಪೊಲೀಸ್ ಠಾಣೆ ಪ್ರಾಧಿಕಾರಿಗಳು, ಪ್ರಾಸಿಕ್ಯೂಷನ್‌ನ ಅನುಮತಿಯನ್ನು ಪಡೆದ ಮೇಲೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಸಿಟಿ ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದ್ದಾರೆ.
ಈ ಪ್ರಕ್ರಿಯೆಯಿಂದ ಸಂಜನಾ ಗಲ್ರಾನಿಗೆ ಮತ್ತೆ ಕಾನೂನು ಸಮಸ್ಯೆಗಳು ಎದುರಾಗುವ ಸಾಧ್ಯತೆ ಹೆಚ್ಚಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…