Latest

ನಟಿ ಸಂಜನಾ ಗಲ್ರಾನಿಗೆ ಮತ್ತೆ ಕಾನೂನಿನ ಸಂಕಷ್ಟ: ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ

ಮಾದಕ ವಸ್ತು ಸೇವನೆ ಸಂಬಂಧಿಸಿರುವ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಅವರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗುತ್ತಿದೆ. ಈ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಸಂಜನಾ, ಈ ಪ್ರಕರಣದಲ್ಲಿ ಆರೋಪಿಯಾಗಿದ್ದಳು. ಆದರೆ, ಹೈಕೋರ್ಟ್ನಲ್ಲಿ ಈ ಕೇಸ್ ರದ್ದು ಮಾಡಲಾಗಿತ್ತು, ಜೊತೆಗೆ ಕೊನೆಯ ತೀರ್ಪು ಕೂಡ ಬಂದಿತ್ತು.

ಆದ್ರೆ ಇದೀಗ, ಸಂಜನಾ ವಿರುದ್ಧದ ಈ ಕೇಸ್ ಹೈಕೋರ್ಟ್ನಲ್ಲಿ ರದ್ದುಮಾಡುವ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಪೊಲೀಸರು ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಈ ತಿಂಗಳ ಕೊನೆಯಲ್ಲಿ ಮೇಲ್ಮನವಿ ಸಲ್ಲಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಹಾಗಾದರೆ, ಸಿಸಿಬಿ ಪೊಲೀಸ್ ಠಾಣೆ ಪ್ರಾಧಿಕಾರಿಗಳು, ಪ್ರಾಸಿಕ್ಯೂಷನ್‌ನ ಅನುಮತಿಯನ್ನು ಪಡೆದ ಮೇಲೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಸಿಟಿ ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದ್ದಾರೆ.

ಈ ಪ್ರಕ್ರಿಯೆಯಿಂದ ಸಂಜನಾ ಗಲ್ರಾನಿಗೆ ಮತ್ತೆ ಕಾನೂನು ಸಮಸ್ಯೆಗಳು ಎದುರಾಗುವ ಸಾಧ್ಯತೆ ಹೆಚ್ಚಿದೆ.

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

7 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

22 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago