ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಅಭಿನಯಿಸಿರುವ ನಟಿ ಯಮುನಾ 12 ವರ್ಷಗಳ ಹಿಂದೆ ದೊಡ್ಡ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ನಾಲ್ಕು ಮಹಡಿಗಳನ್ನು ಬಾಡಿಗೆ ಪಡೆದುಕೊಂಡು, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಪೊಲೀಸರು ರೇಡ್ ಮಾಡಿ, ನಟಿ ಯಮುನಾರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯಲ್ಲಿ ನಾನು ನಿರಪರಾಧಿ ಎಂದು ಸಾಬೀತು ಮಾಡಿದ್ದರೂ, ಜನರು ಪದೆ ಪದೇ ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಟಾರ್ಗೆಟ್ ಮಾಡುತ್ತಿರುವುದು ತಪ್ಪು ಎಂದು ಹೇಳಿಕೊಂಡಿದ್ದಾರೆ.
‘ಎಲ್ಲರಿಗೂ ನಮಸ್ಕಾರ. ಜೀವನದಲ್ಲಿ ನನ್ನನ್ನು ನಾನು ಎಷ್ಟು ಮೋಟಿವೇಟ್ ಮಾಡಿಕೊಂಡರೂ ಕಾಡುತ್ತಿರುವುದು ಒಂದೇ ನೋವು. ಇಷ್ಟು ವರ್ಷವಾದರೂ ಆ ನೋವು ನನ್ನಲ್ಲಿ ಉಳಿದು ಬಿಟ್ಟಿದೆ. ಪದೇ ಪದೇ ನೋವಾಗಲು ಕಾರಣ ಸೋಷಿಯಲ್ ಮೀಡಿಯಾ. ಬಹಳ ವರ್ಷಗಳ ಹಿಂದೆಯೇ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಅದರಿಂದ ಹೊರ ಬಂದು ನಿಶ್ಚಿಂತೆಯಿಂದ ಜೀವನ ನಡೆಸುತ್ತಿರುವೆ. ಆ ಸಮಸ್ಯೆಯಲ್ಲಿ ಹೇಗೆ ಸಿಲುಕಿಕೊಂಡೆ ಎಂದು ಈಗಾಗಲೇ ಅನೇಕ ಸಂದರ್ಶನದಲ್ಲಿ ಹೇಳಿಕೊಂಡು, ನಾನಾ ರೀತಿಯಲ್ಲಿ ಕ್ಲಾರಿಟಿ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ಸ್ವತಃ ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ಕೊಟ್ಟಿದೆ. ನನ್ನನ್ನು ನ್ಯಾಯ ಗೆಲ್ಲಿಸಿದೆ. ನ್ಯಾಯಯುತವಾಗಿ ನಾನು ಗೆಲ್ಲುವು ಸಾಧಿಸಿರುವೆ. ಆದರೆ ಸಾಮಾಜಿಕ ಜಾಲತಾಣವನ್ನು ನಾನು ಕಂಟ್ರೋಲ್ ಮಾಡಲು ಆಗುತ್ತಿಲ್ಲ,’ ಎಂದು ವಿಡಿಯೋದಲ್ಲಿ ಯಮುನಾ ನೋವು ತೋಡಿಕೊಂಡಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…