Categories: CorruptionLatest

ಹೊಲದ ಹದ್ದುಬಸ್ತಿಗೆ ಲಂಚ ಬೇಡಿಕೆ: ಎಡಿಎಲ್‌ಆರ್ ಕಚೇರಿ ಸರ್ವೇಯರ್ ಲೋಕಾಯುಕ್ತ ಬಲೆಗೆ

ಹೊಸಪೇಟೆ: ಜಮೀನಿನ ಹದ್ದುಬಸ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಚ್.ಬಿ.ಹಳ್ಳಿ ಎಡಿಎಲ್‌ಆರ್ (ADLR) ಕಚೇರಿಯ ಸರ್ವೇಯರ್ ಕೊಟ್ರೇಶ್ ನಾಯಕ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ದೂರುದಾರ ದೇವೇಂದ್ರ ವರದಾಪುರ ಅವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ 2024ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಸರ್ವೇಯರ್ ಕೊಟ್ರೇಶ್ ನಾಯಕ್ ಕೆಲಸವನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಾ ಹಲವು ತಿಂಗಳುಗಳಿಂದ ಸತಾಯಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಈಗಾಗಲೇ ₹10 ಸಾವಿರ ಲಂಚ ಪಡೆದಿದ್ದ ಆರೋಪಿ, ಕೆಲಸ ಪೂರ್ಣಗೊಳಿಸಲು ಮತ್ತೆ ₹30 ಸಾವಿರ ನೀಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಇದರಿಂದ ಬೇಸತ್ತ ದೂರುದಾರರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು.

ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಕೊಟ್ರೇಶ್ ನಾಯಕ್ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ದಾಳಿ ಹೇಗೆ ನಡೆಯಿತು?

ಪೊಲೀಸ್ ಉಪಾಧೀಕ್ಷಕ ಸಚಿನ್ ಎಸ್. ಛಲವಾದಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ರಾಜೇಶ್ ಎಸ್. ಲಮಾಣಿ ನೇತೃತ್ವದಲ್ಲಿ ದಾಳಿ ನಡೆದಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಹುಬ್ಬಿ ಸೇರಿದಂತೆ ಸಿಬ್ಬಂದಿಗಳಾದ ಸುರೇಶ್, ಶ್ರೀನಿವಾಸ, ರೇಣುಕಪ್ಪ, ಕುಮಾರ ನಾಯ್ಕ, ಚನ್ನಬಸಪ್ಪ ಹಾಗೂ ಕೃಷ್ಣ ಭಾಗವಹಿಸಿದ್ದರು.

ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

17 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago