ಕಾರ್ಕಳ: ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಆರೋಪಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣದ ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್‌ಪಿ) ಸಲ್ಲಿಸಿದ ಪ್ರಾಥಮಿಕ ತನಿಖಾ ವರದಿಯನ್ನು ಆಧರಿಸಿ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಅಮಾನತುಗೊಂಡವರಲ್ಲಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಶಿವಾನಂದ ಸೇರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಶಿಸ್ತು ಕ್ರಮವನ್ನು ಈಗಾಗಲೇ ಆರಂಭಿಸಲಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಈ ನಡುವೆ, ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ಮುಂದುವರಿದಿದ್ದು, ಅಂತಿಮ ತನಿಖಾ ವರದಿ ಸಲ್ಲಿಕೆಯಾದ ಬಳಿಕ ಅದರಲ್ಲಿ ಕಂಡುಬರುವ ಅಂಶಗಳ ಆಧಾರದ ಮೇಲೆ ಮುಂದಿನ ಆಡಳಿತಾತ್ಮಕ ಹಾಗೂ ಶಿಸ್ತು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಸೂಚನೆ: ಈ ಪ್ರಕರಣದಲ್ಲಿನ ಆರೋಪಗಳು ಇನ್ನೂ ತನಿಖೆಯ ಹಂತದಲ್ಲಿವೆ. ಇಲಾಖೆಯ ಅಂತಿಮ ತನಿಖಾ ವರದಿ ಹಾಗೂ ಅಧಿಕೃತ ಆದೇಶದ ಬಳಿಕವೇ ಪ್ರಕರಣದ ಅಂತಿಮ ಸ್ಥಿತಿ ಸ್ಪಷ್ಟವಾಗಲಿದೆ.

Related News

error: Content is protected !!