Categories: CrimeLatest

ಮಸ್ಕಿಯಲ್ಲಿ ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಮಾರಣಾಂತಿಕ ಹಲ್ಲೆ ಆರೋಪ: ತನಿಖೆಗೆ ಆಗ್ರಹ

ಲಿಂಗಸಗೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದಲ್ಲಿ ರೈತನೊಬ್ಬನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ರೈತ ರಮೇಶ (ಹನುಮಂತ ಅವರ ಪುತ್ರ) ಲಿಂಗಸಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಂಎಲ್‌ಸಿ ದಾಖಲಾಗಿದೆ.

ಯರದೊಡ್ಡಿ ಗ್ರಾಮದ ಸರ್ವೆ ನಂಬರ್ 29ರ ರಸ್ತೆ ಬದಿಯ ಜಮೀನಿನ ಬಳಿ ಸಸಿ ನೆಡುವ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ ತನಕ ಅಧಿಕಾರಿಗಳು ಹಾಗೂ ಸಿಬ್ಬಂದಿ ರೈತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಲವಂತವಾಗಿ ಸಹಿ ಪಡೆದು ಹಣಕ್ಕೆ ಬೇಡಿಕೆ ಆರೋಪ

ಸಸಿ ನೆಡುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಹಲ್ಲೆಗೆ ತಿರುಗಿದ್ದು, ರೈತನಿಗೆ ಮನಬಂದಂತೆ ಥಳಿಸಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಹಲ್ಲೆ ನಡೆಸಿದ ಬಳಿಕ ರೈತನಿಂದ ಬಲವಂತವಾಗಿ ಸಹಿ ಪಡೆದು, ಹಣಕ್ಕೆ ಬೇಡಿಕೆ ಇಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಘಟನೆ ಗ್ರಾಮಸ್ಥರಲ್ಲಿ ಆಕ್ರೋಶ ಮೂಡಿಸಿದೆ.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಘಟನೆಯ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪ ಸಾಬೀತಾದರೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅರಣ್ಯ ಇಲಾಖೆ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದ್ದು, ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.

ಭ್ರಷ್ಟರ ಬೇಟೆ

Recent Posts

ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ

ಮೀರತ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರತ್‌ನ ಬ್ಲೂ ಡ್ರಮ್ ಕೊಲೆ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ…

2 days ago

ಚಿಕ್ಕೋಡಿಯಲ್ಲಿ ಉಪಲೋಕಾಯುಕ್ತರ ದಿಢೀರ್ ತಪಾಸಣೆ: ಸರ್ಕಾರಿ ಕಚೇರಿಗಳ ಲೋಪದೋಷಗಳ ವಿರುದ್ಧ 27 ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸೆಪ್ಟೆಂಬರ್ 24…

5 days ago

ಕಂದಾಯ ದಾಖಲೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗೆ ಅಮಾನತು ಬಿಸಿ ಮುಟ್ಟಿಸಿದ ಡಿಸಿಎಂ ಪರಮೇಶ್ವರ್

ದೇವನಹಳ್ಳಿ: ಕಂದಾಯ ದಾಖಲೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಯೊಬ್ಬರನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅಮಾನತುಗೊಳಿಸಿದ್ದಾರೆ. ಶುಕ್ರವಾರ ದೇವನಹಳ್ಳಿ…

5 days ago

ಹೋಟೆಲ್‌ನಲ್ಲಿ ಪತ್ನಿ ಪ್ರಿಯಕರನ ಜೊತೆ! 4 ಗಂಟೆ ಕಾದು ರೆಡ್‌ಹ್ಯಾಂಡ್‌ ಆಗಿ ಹಿಡಿದ ಪತಿ; ನಡುರಸ್ತೆಯಲ್ಲೇ ಹೈಡ್ರಾಮಾ

ಬಿಜ್ನೋರ್ (ಉತ್ತರ ಪ್ರದೇಶ): ಪತ್ನಿಯು ಮತ್ತೊಬ್ಬ ಯುವಕನೊಂದಿಗೆ ಹೋಟೆಲ್‌ನಲ್ಲಿ ಸಮಯ ಕಳೆದು ಹೊರಬರುತ್ತಿದ್ದಾಗ ಪತಿಯ ಕೈಗೆ ಸಿಕ್ಕಿಬಿದ್ದ ಘಟನೆ ಉತ್ತರ…

5 days ago

ಲೈಕ್ಸ್‌, ವ್ಯೂಸ್‌ಗಾಗಿ ತಾಯಿ-ಮಗನ ಸಂಬಂಧವೇ ಅಸ್ತ್ರ? 20 ವರ್ಷದ ಮಗನ ಜೊತೆ ಪ್ರೇಮಿಗಳಂತೆ ರೀಲ್ಸ್‌; ನೆಟ್ಟಿಗರ ಆಕ್ರೋಶ!

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್‌ ಮತ್ತು ವ್ಯೂಸ್‌ ಗಳಿಸುವ ಹುಚ್ಚಿನಲ್ಲಿ ಕೆಲವರು ಸಂಬಂಧಗಳ ಘನತೆಯನ್ನೇ ಮರೆತುಬಿಡುತ್ತಿದ್ದಾರೆಯೇ ಎಂಬ ಚರ್ಚೆ ಇದೀಗ…

5 days ago

ಹನಿ ಟ್ರ್ಯಾಪ್ ಬಲೆಗೆ ಬ್ಯಾಂಕ್ ಮ್ಯಾನೇಜರ್! ₹3 ಲಕ್ಷ ಪಡೆದ ಬಳಿಕ ಮತ್ತೆ ₹5 ಲಕ್ಷಕ್ಕೆ ಬೇಡಿಕೆ; ಐವರ ವಶಕ್ಕೆ ಪಡೆದ ಪೊಲೀಸರು

ಜೋರ್ಹಾಟ್: ಹನಿ ಟ್ರ್ಯಾಪ್ ಮೂಲಕ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದ ಮೇಲೆ…

5 days ago