Categories: CrimeLatest

ರೆಸ್ಟೋ ಬಾರ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ ಆರೋಪ; ಯೂಟ್ಯೂಬರ್ ‘ಅಮುಕು ಡುಮುಕು’ ಮಂಜು ವಿರುದ್ಧ FIR ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ‘ಅಮುಕು ಡುಮುಕು’ ಹೆಸರಿನಿಂದ ಪರಿಚಿತರಾಗಿರುವ ಯೂಟ್ಯೂಬರ್ ಮಂಜು ವಿರುದ್ಧ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆರೋಪದ ಪ್ರಕಾರ, ನಗರದ ರೆಸ್ಟೋ ಬಾರ್ ಒಂದರಲ್ಲಿ ಮದ್ಯದ ಅಮಲಿನಲ್ಲಿದ್ದ ಮಂಜು ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಪ್ರಚಾರದ ಅವಕಾಶ ಕಲ್ಪಿಸುವುದಾಗಿ ಹೇಳಿ ಯುವತಿಯೊಂದಿಗೆ ಅನುಚಿತವಾಗಿ ಮಾತನಾಡಿದ್ದು, ಆಕೆಯ ಕೈ ಹಿಡಿದು ಅವಮಾನಕರವಾಗಿ ವರ್ತಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆ ವೇಳೆ ಪಬ್ ಮ್ಯಾನೇಜರ್ ಮೇಲೆಯೂ ಹಲ್ಲೆಗೆ ಯತ್ನಿಸಿದ ಆರೋಪ ದಾಖಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಸಂಬಂಧ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಹೇಳಿಕೆಗಳು ಮತ್ತು ವರ್ತನೆಯ ಮೂಲಕ ಆಗಾಗ ಸುದ್ದಿಯಾಗುತ್ತಿದ್ದ ಮಂಜು, ಈ ಹಿಂದೆ ಹಲವು ವೈರಲ್ ವಿಡಿಯೊಗಳ ಮೂಲಕ ಗಮನ ಸೆಳೆದಿದ್ದ. ಇದೀಗ ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago