Categories: CrimeLatest

ಪತ್ನಿ, ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಪಿಎಸ್‌ಐ ವಿರುದ್ಧ ವರದಕ್ಷಿಣೆ ಕಿರುಕುಳದ ಗಂಭೀರ ದೂರು

ಬೆಂಗಳೂರು: ಪತ್ನಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಪಿಎಸ್‌ಐ ಭೈರಪ್ಪ ವಿರುದ್ಧ ಕೇಳಿಬಂದಿದೆ. ಇದರ ಜೊತೆಗೆ, ಪತ್ನಿಗೆ ನಿರಂತರವಾಗಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆಂಬ ಆರೋಪವೂ ಕುಟುಂಬಸ್ಥರಿಂದ ವ್ಯಕ್ತವಾಗಿದೆ.

ಪತ್ನಿಯ ಆರೋಪದ ಪ್ರಕಾರ, ತವರು ಮನೆಯಿಂದ ಪದೇ ಪದೇ ಹಣ ತಂದುಕೊಡುವಂತೆ ಭೈರಪ್ಪ ಒತ್ತಡ ಹೇರುತ್ತಿದ್ದು, ಸುಮಾರು ₹50 ಲಕ್ಷ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಗಲಾಟೆ ನಡೆದ ಸಂದರ್ಭಗಳಲ್ಲಿ ಪತ್ನಿ ಮತ್ತು ಮಗುವನ್ನು ಬಿಟ್ಟು, ಬಟ್ಟೆಗಳನ್ನು ಚೀಲದಲ್ಲಿ ತುಂಬಿಕೊಂಡು ಮನೆ ತೊರೆಯುತ್ತಿದ್ದರು ಎಂದೂ ದೂರಲಾಗಿದೆ.

ಇತ್ತೀಚೆಗೆ ನಡೆದ ಗಲಾಟೆಯ ವೇಳೆ ಪತ್ನಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದೇ ವೇಳೆ, ಪಿಎಸ್‌ಐ ವಿರುದ್ಧ ದೂರು ನೀಡಲು ಮುಂದಾದಾಗ ಕೆಂಗೇರಿ ಪೊಲೀಸರು ಸಮರ್ಪಕವಾಗಿ ದೂರು ಸ್ವೀಕರಿಸದೆ, ಪೂರ್ಣ ಪ್ರಮಾಣದ ಪ್ರಕರಣ ದಾಖಲಿಸುವ ಬದಲು ಕೇವಲ ಎನ್‌ಸಿಆರ್ ದಾಖಲಿಸಿ ಕಳುಹಿಸುತ್ತಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪಿಎಸ್‌ಐ ಭೈರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಲು ಪತ್ನಿ ಮುಂದಾಗಿದ್ದಾರೆ. ಭೈರಪ್ಪ ಪ್ರಸ್ತುತ ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ಸೂಚನೆ: ಮೇಲಿನ ವಿವರಗಳು ದೂರುದಾರರು ಹಾಗೂ ಕುಟುಂಬಸ್ಥರು ಮಾಡಿರುವ ಆರೋಪಗಳನ್ನು ಆಧರಿಸಿವೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ತನಿಖೆ ಮತ್ತು ಅಧಿಕೃತ ಸ್ಪಷ್ಟೀಕರಣದ ಬಳಿಕವಷ್ಟೇ ಆರೋಪಗಳ ಸತ್ಯಾಸತ್ಯತೆ ದೃಢಪಡಬೇಕಿದೆ.

ಭ್ರಷ್ಟರ ಬೇಟೆ

Recent Posts

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

8 hours ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

8 hours ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

8 hours ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

8 hours ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

8 hours ago

ಪ್ರಿಯಕರನ ಜೊತೆ OYO ರೂಂಗೆ ಬಂದ ಯುವತಿ ಅನುಮಾನಾಸ್ಪದ ಸಾವು: ಆಸ್ಪತ್ರೆಯಿಂದಲೇ ಪ್ರಿಯಕರ ಪರಾರಿ

ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…

8 hours ago