ಬದಿಯಡ್ಕ: ಯುವಕನನ್ನು ಅಪಹರಿಸಿ ಬಾಲಕಿ ಜತೆ ಅರೆನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿ, ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ₹1.02 ಲಕ್ಷ ನಗದು ದೋಚಿದ ಆರೋಪದಡಿ ಐವರ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸೇರಾಜೆ ನಿವಾಸಿ ಎ.ಎಸ್. ಸುಜಿತ್ ಅವರು ಪೊಲೀಸರಿಗೆ ದೂರು ನೀಡಿದ್ದು, ಆಗಸ್ಟ್ 29ರಂದು ತಮ್ಮನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯೊಂದರಲ್ಲಿ ಕೂಡಿ ಹಾಕಲಾಗಿತ್ತು ಎಂದು ತಿಳಿಸಿದ್ದಾರೆ.
ಈ ವೇಳೆ ಅಪ್ರಾಪ್ತ ಬಾಲಕಿಯೊಂದಿಗೆ ಅರೆನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿ, ಅದನ್ನು ಬಳಸಿಕೊಂಡು ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಬೆದರಿಕೆಯ ಮೂಲಕ ₹1,02,000 ನಗದು ಪಡೆದುಕೊಂಡು ದೋಚಿದ್ದಾರೆ ಎಂದು ಸುಜಿತ್ ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಬದಿಯಡ್ಕ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಹಾಗೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…