ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದ್ದು, ಈ ಕಿರುಕುಳದಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಬಳಿಯ ಅಗರ ಕೆರೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ವಾಣಿ ಎಂದು ಗುರುತಿಸಲಾಗಿದೆ. ಕಾಲೇಜು ದಿನಗಳಲ್ಲಿ ಅಭಿಷೇಕ್ ಎಂಬಾತನ ಪರಿಚಯವಾಗಿ, ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಎನ್ನಲಾಗಿದೆ.
ಕಾಲೇಜು ಶಿಕ್ಷಣ ಪೂರ್ಣಗೊಂಡ ಬಳಿಕ ವಾಣಿ ಬೆಂಗಳೂರಿಗೆ ಬಂದು ಹೆಚ್‌ಎಸ್‌ಆರ್ ಲೇಔಟ್‌ನ ಖಾಸಗಿ ಚಿನ್ನದ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ಅಭಿಷೇಕ್ ಆಕೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ವಾಣಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡಿದ್ದ ಅಭಿಷೇಕ್, ತಾನು ಹೇಳಿದಂತೆ ನಡೆದುಕೊಳ್ಳಬೇಕು, ಇಲ್ಲವಾದರೆ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಈ ಕಾರಣದಿಂದ ವಾಣಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತಿದ್ದ ವಾಣಿ, ಡೆತ್‌ನೋಟ್ ಬರೆದಿಟ್ಟು ಅಗರ ಕೆರೆಗೆ ತೆರಳಿದ್ದರು ಎನ್ನಲಾಗಿದೆ. ಬಳಿಕ ಆಕೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಭಿಷೇಕ್ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ಖಾಸಗಿ ಫೋಟೋ-ವಿಡಿಯೋಗಳನ್ನು ಬಳಸಿಕೊಂಡು ಬೆದರಿಕೆ ಹಾಕಲಾಗಿತ್ತೇ, ಆತ್ಮಹತ್ಯೆಗೆ ಕಿರುಕುಳವೇ ಕಾರಣವೇ ಎಂಬುದರ ಬಗ್ಗೆ ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…