Latest

ಗಾಂಜಾ ಸೇವನೆ ಆರೋಪ: ಕದ್ರಿ ಪೊಲೀಸರಿಂದ ಇಬ್ಬರ ಆರೋಪಿಗಳು ಅರೆಸ್ಟ್.

ಮಂಗಳೂರು: ಗಾಂಜಾ ಸೇವನೆ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಶಿವಬಾಗ್ ಮತ್ತು ಬಿಕರ್ನಕಟ್ಟೆ ಪ್ರದೇಶಗಳಲ್ಲಿ ಈ ಬಂಧನ ನಡೆದಿದ್ದು, ಬಂಧಿತರನ್ನು ಬಿಕರ್ನಕಟ್ಟೆ ಕಕ್ಕೆಬೆಟ್ಟು ನಿವಾಸಿ ಜ್ಞಾನೇಶ್ ರೈ (20) ಮತ್ತು ಬಿಕರ್ನಕಟ್ಟೆ ದತ್ತನಗರದ ಕೌಶಿಕ್ (21) ಎಂದು ಗುರುತಿಸಲಾಗಿದೆ.

ಮಾದಕ ದ್ರವ್ಯ ಬಳಕೆ ಕುರಿತು ದೊರೆತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಇದರಿಂದಾಗಿ ಅವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಆಂಡ್ ಸೈಕೋಟ್ರೋಪಿಕ್ ಸಬ್‌ಸ್ಟಾನ್ಸಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳು ಗಾಂಜಾ ಖರೀದಿ ಮಾಡಿದ ಮೂಲ ಹಾಗೂ ಅವರ ಸಂಪರ್ಕಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾದಕ ದ್ರವ್ಯ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇಂತಹ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ನಿಲುವು ಅನುಸರಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago