Categories: CorruptionLatest

ಕೆಬಿಜೆಎನ್ಎಲ್ ಶಾಖಾ ಕಾಲುವೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ; ರೈತರ ಆಕ್ರೋಶ, ಹೋರಾಟದ ಎಚ್ಚರಿಕೆ

ವಿಜಯಪುರ: ರೈತರಿಗೆ ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅದರ ಭಾಗವಾಗಿ ಬಸವನ ಬಾಗೇವಾಡಿ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಕೆಬಿಜೆಎನ್ಎಲ್ ವತಿಯಿಂದ ಶಾಖಾ ಕಾಲುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರ ಅಮರಗೋಂಡ ಮೇಟಿ ಅವರಿಂದ ಕಾಮಗಾರಿ ನಡೆಯುತ್ತಿದ್ದು, ಕೆಲವು ಭಾಗಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಕಬ್ಬಿಣ ಬಳಸದೇ, ಕಳಪೆ ಗುಣಮಟ್ಟದ ಕಾಂಕ್ರೀಟ್‌ನಿಂದ ಕಾಮಗಾರಿ ನಡೆಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಅಲ್ಲದೆ, ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ನಿರ್ಮಾಣದ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಟಕ್ಕಳಕಿ ಗ್ರಾಮದ ರೈತ ರುದ್ರಗೌಡ ಮಹದೇವಪ್ಪಗೌಡ ಬಿರಾದಾರ ಮಾತನಾಡಿ, ಕಾಮಗಾರಿಯಲ್ಲಿನ ಅವ್ಯವಸ್ಥೆ ಕುರಿತು ಪ್ರಶ್ನಿಸಿದಾಗ ಸ್ಥಳದಲ್ಲಿದ್ದ ಕೆಲಸಗಾರರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ರೈತರಿಗೆ ದೀರ್ಘಕಾಲ ಉಪಯೋಗವಾಗುವ ರೀತಿಯಲ್ಲಿ ಗುಣಮಟ್ಟದ ಕಾಲುವೆ ನಿರ್ಮಾಣವಾಗಬೇಕು ಎಂದು ಅವರು ಆಗ್ರಹಿಸಿದರು.

ಕೆಬಿಜೆಎನ್ಎಲ್ ಇಲಾಖೆಯ ಎಸ್‌ಇ ಗೋವಿಂದ ರಾಠೋಡ, ಇಇ ವಿದ್ಯಾಧರ ಹಾಗೂ ಎಇ ಅನೀಲ ರಾಠೋಡ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಬೇಕು. ಕಾಮಗಾರಿಯಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳದಿದ್ದರೆ, ಗ್ರಾಮೀಣ ಭಾಗದ ರೈತರೆಲ್ಲರೂ ಸೇರಿ ಇಲಾಖೆಯ ಮುಖ್ಯ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago