Latest

ಮುಂಬೈ ಏರ್‌ಪೋರ್ಟ್‌ನಲ್ಲಿ ಗ್ಲಾಸ್, ಮಾಸ್ಕ್ ತೆಗೆಯಲು ನಿರಾಕರಿಸಿದ ಅಲ್ಲು ಅರ್ಜುನ್ – CISF ಜೊತೆ ವಾಗ್ವಾದ

ಮುಂಬೈ: ಟಾಲಿವುಡ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಇದೀಗ ‘ಪುಷ್ಪ-2’ ಬಳಿಕ ನಿರ್ದೇಶಕ ಅಟ್ಲಿ ಕುಮಾರ್ ಜೊತೆಗಿನ ಹೊಸ ಚಿತ್ರದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಬಿಗ್‌ ಬಜೆಟ್‌ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ರಾಜೆಕ್ಟ್‌ ಬಗ್ಗೆ ಈಗಾಗಲೇ ಸಿನಿಮಾ ವಲಯದಲ್ಲಿ ಚರ್ಚೆ ಜೋರಾಗಿದೆ.

ಈ ನಡುವೆ, ಅಲ್ಲು ಅರ್ಜುನ್ ಅವರ ವಿಮಾನ ನಿಲ್ದಾಣದ ವರ್ತನೆಗೆ ಸಂಬಂಧಿಸಿದ ವಿಡಿಯೋ ಶನಿವಾರ (ಆಗಸ್ಟ್ 9) ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ CISF ಭದ್ರತಾ ಸಿಬ್ಬಂದಿ ಜೊತೆ ಅವರು ವಾಗ್ವಾದ ನಡೆಸಿದ ದೃಶ್ಯಗಳು ನೆಟ್ಟಿಗರ ಗಮನ ಸೆಳೆದಿವೆ.

ಮಾಹಿತಿಯ ಪ್ರಕಾರ, ಮಾಸ್ಕ್ ಧರಿಸಿಕೊಂಡು ಬಂದಿದ್ದ ಅಲ್ಲು ಅರ್ಜುನ್ ಅವರನ್ನು, ಗುರುತಿನ ಪರಿಶೀಲನೆಗಾಗಿ ಭದ್ರತಾ ಸಿಬ್ಬಂದಿ ಮುಖ ತೋರಿಸುವಂತೆ ಕೇಳಿದ್ದಾರೆ. ಆದರೆ ಈ ಮನವಿಗೆ ಆರಂಭದಲ್ಲಿ ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲ ಕ್ಷಣ ವಾಗ್ವಾದ ನಡೆದಿರುವುದು ವಿಡಿಯೋದಲ್ಲಿ ಗೋಚರಿಸಿದೆ. ಅವರ ತಂಡದ ಸದಸ್ಯರೂ ಸಿಬ್ಬಂದಿ ಜೊತೆ ಮಾತನಾಡಲು ಮುಂದಾದರೂ, CISF ಸಿಬ್ಬಂದಿ ನಿಯಮ ಪಾಲನೆಗಾಗಿ ಒತ್ತಾಯಿಸಿದ್ದಾರೆ. ಕೊನೆಗೆ, ಅಲ್ಲು ಅರ್ಜುನ್ ಸ್ವಲ್ಪ ಬೇಸರದ ಮುಖಭಾವದೊಂದಿಗೆ ಮಾಸ್ಕ್ ತೆಗೆದು ಮುಖ ತೋರಿಸಿದ್ದಾರೆ.

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ನೆಟ್ಟಿಗರ ಪ್ರತಿಕ್ರಿಯೆಗಳು ಮಿಶ್ರವಾಗಿವೆ. ಕೆಲವರು “ನಿಯಮ ಎಲ್ಲರಿಗೂ ಒಂದೇ” ಎಂದು ಹೇಳಿ ಭದ್ರತಾ ಸಿಬ್ಬಂದಿಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಅಲ್ಲು ಅರ್ಜುನ್‌ ಅವರ ವರ್ತನೆಯನ್ನು “ದುರಹಂಕಾರಿ” ಎಂದು ಟೀಕಿಸಿದ್ದಾರೆ.

ಈ ಘಟನೆಯಿಂದ, ಸ್ಟಾರ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಪ್ರಶ್ನೆಯೂ ಮತ್ತೆ ಚರ್ಚೆಗೆ ಬಂದಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

7 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

10 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

15 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago