ಬೆಳಗಾವಿ ಜಿಲ್ಲೆಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನುಷ್ಯತ್ವವೇ ತಲೆ ತಗ್ಗಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆಯಾಗಿದ್ದು, ಈಗಾಗಲೇ ಎರಡು ಮಕ್ಕಳ ತಂದೆಯಾಗಿರುವ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ನಡೆದಿದೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲುಗೊಂಡಿದ್ದು, ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ, ಅಪ್ರಾಪ್ತೆಯನ್ನು ಪುಸಲಾಯಿಸಿ ನಿರಂತರವಾಗಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿರುವುದು ಪೋಷಕರ ಗಮನಕ್ಕೆ ಬಂದಿದೆ.
ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡುಬಂದ ಕಾರಣ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದರಿಂದ ಪೋಷಕರು ತೀವ್ರ ಶೋಕಕ್ಕೆ ಒಳಗಾದರು. ತಕ್ಷಣವೇ ಅವರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಕೃತ್ಯ ಸಾಮಾಜಿಕವಾಗಿ ಖಂಡನೀಯವಾಗಿದ್ದು, ಇಂತಹ ಘಟನೆಗಳು ಪುನರಾವೃತ್ತಿ ಆಗದಂತೆ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…