Latest

ಅಂಗನವಾಡಿ ಸಹಾಯಕಿಯಿಂದ ಬಾಲಕಿಗೆ ಹಲ್ಲೆ: ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾ ಅಧಿಕಾರಿಗಳು

ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಅಂಗನವಾಡಿ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಗುಲಗಾಲಜಂಬಗಿ ಗ್ರಾಮದ ವಾರ್ಡ್ ಸಂಖ್ಯೆ 2ರ ಅಂಗನವಾಡಿಯಲ್ಲಿ ಸಹಾಯಕಿ ಅಮಾನುಷ ವರ್ತನೆ ಮೆರೆದಿದ್ದು, ಪುಟ್ಟ ಬಾಲಕಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಚಿಕ್ಕ ಕಾರಣಕ್ಕೆ ಹಲ್ಲೆ:

ಪ್ರೀತಿ ಎಂಬ ಪುಟ್ಟ ಬಾಲಕಿ ಎಂದಿನಂತೆ ಅಂಗನವಾಡಿಗೆ ಹಾಜರಾದಳು. ಆದರೆ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿ ಶಾರವ್ವ ಪಂಚಗಾವಿ, ಅನ್ನದ ಚಮಚದಿಂದ ಬಾಲಕಿಯ ಕೆನ್ನೆ ಮೇಲೆ ಬರೆ ಎಳೆಯುವ ಅಮಾನುಷ ಕೃತ್ಯವೆಸಗಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ, ಸ್ಥಳೀಯರು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣದ ಕ್ರಮ:

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ (CDPO) ಕಾಶಿಬಾಯಿ ಕೋರೆಗೋಳ, ಅಂಗನವಾಡಿ ಕಾರ್ಯಕರ್ತೆ ಶೋಭಾ ಹೊಳೆಪ್ಪನವರ ಮತ್ತು ಸಹಾಯಕಿ ಶಾರವ್ವ ಪಂಚಗಾವಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾರೆ. ಅಲ್ಲದೆ, ಆ ಅಂಗನವಾಡಿಯಲ್ಲಿ ಬೇರೊಬ್ಬರನ್ನು ನೇಮಕ ಮಾಡುವಂತೆ ಆದೇಶ ನೀಡಿದ್ದಾರೆ.

ಆರೋಗ್ಯ ಸ್ಥಿತಿ ಮತ್ತು ಮುಂದಿನ ಕ್ರಮ:

ಬಾಲಕಿಗೆ ತಕ್ಷಣವೇ ಚಿಕಿತ್ಸೆಗಾಗಿ ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಹಿನ್ನಲೆಯಲ್ಲಿ, ಸ್ಥಳೀಯರು ಘಟನೆಯ ವಿರುದ್ಧ ಗಂಭೀರವಾಗಿ ಪ್ರತಿಕ್ರಿಯಿಸಿ, ಸಕಾಲಿಕ ಕ್ರಮ ಕೈಗೊಳ್ಳುವಂತೆ ಬೇಡಿಕೆ ಇಟ್ಟಿದ್ದಾರೆ.

ಈ ಘಟನೆಯು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಆಡಳಿತ ವ್ಯವಸ್ಥೆ ಕುರಿತು ಹಲವಾರು ಪ್ರಶ್ನೆಗಳನ್ನೆದ್ದಿದೆ. ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಮೇಲಿನ ಹಲ್ಲೆ ಪ್ರಕರಣಗಳಿಗೆ ಕಡಿವಾಣ ಹಾಕಬೇಕಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago