ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ ಕೋಪದಲ್ಲಿ ಮಂಜ, ಸಂತು ಮನೆ ಬಳಿ ತೆರಳಿ ಗಲಾಟೆ ನಡೆಸಿ, ಸಂತು ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ನಿನ್ನೆ ಸಂಜೆ ಮಂಜ ಕಂಠಪೂರ್ತಿ ಕುಡಿದು ಸಂತು ಮನೆ ಬಳಿ ತೆರಳಿದ್ದಾನೆ ಎನ್ನಲಾಗಿದೆ. ಈ ವೇಳೆ ಮನೆಯವರೊಂದಿಗೆ ಗಲಾಟೆ ಮಾಡಿಕೊಂಡಿದ್ದಲ್ಲದೆ, ಸಂತು ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿ ದಾಂಧಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಿಂದ ಸಂತು ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದು, ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ಮಂಜ, ಲೀಲಾ ಹಾಗೂ ಸಂತು ನಡುವಿನ ಸಂಬಂಧದ ವಿಚಾರ ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಗಂಡ ಹಾಗೂ ಮಕ್ಕಳನ್ನು ಬಿಟ್ಟು ಲೀಲಾ ಮಂಜನೊಂದಿಗೆ ತೆರಳಿದ್ದಳು ಎನ್ನಲಾಗಿತ್ತು. ಬಳಿಕ ಮಕ್ಕಳ ಭವಿಷ್ಯಕ್ಕಾಗಿ ಮಂಜನೊಂದಿಗೆ ಹೊಸ ಜೀವನ ಆರಂಭಿಸಿದ್ದ ಲೀಲಾ, ಮಂಜನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಾಗೂ ಪ್ರಮೋಷನ್ ವಿಡಿಯೋಗಳನ್ನು ಮಾಡುತ್ತಿದ್ದಳು.
ಆದರೆ ಕೆಲ ಸಮಯದ ಬಳಿಕ ಲೀಲಾ ಮತ್ತು ಮಂಜ ನಡುವೆ ಮತ್ತೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಸುಮಾರು ಒಂದೂವರೆ ತಿಂಗಳ ಹಿಂದೆ ಲೀಲಾ ಮನೆ ಬಿಟ್ಟು ಬಂದಿದ್ದಳು ಎನ್ನಲಾಗಿದೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಲೀಲಾ ಮತ್ತೆ ಸಂತು ಜೊತೆ ಹೋಗಿದ್ದಾಳೆ ಎಂಬ ರೀತಿಯ ವಿಡಿಯೋಗಳು ಹರಿದಾಡಿದ್ದವು.
ಇದರಿಂದ ಆಕ್ರೋಶಗೊಂಡಿದ್ದ ಮಂಜ, ಸಂತು ಮೇಲಿನ ಕೋಪವನ್ನು ಆತನ ಕುಟುಂಬದ ಮೇಲೆ ತೋರಿಸಿದ್ದಾನೆ ಎನ್ನಲಾಗಿದೆ. ನಿನ್ನೆ ಮದ್ಯದ ಅಮಲಿನಲ್ಲಿ ಸಂತು ಮನೆ ಬಳಿ ತೆರಳಿ ಗಲಾಟೆ ಮಾಡಿ, ಸಂತು ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸದ್ಯ ಸಂತು ತಾಯಿ ನೀಡಿದ ದೂರಿನ ಆಧಾರದ ಮೇಲೆ ಹುಳಿಮಾವು ಪೊಲೀಸರು ಮಂಜ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…