ಬೆಂಗಳೂರು: ಟ್ರಾಫಿಕ್ ಜಾಮ್‌ನ ಮಧ್ಯೆ ನಡೆದ ಸಣ್ಣ ಅಪಘಾತದಿಂದ ಉದ್ಭವಿಸಿದ ಗಲಾಟೆ ದೊಡ್ಡ ಹಂಗಾಮಿಗೆ ಕಾರಣವಾಗಿದೆ. ಬೆಳ್ಳಂದೂರು ವೃತ್ತದಲ್ಲಿ ನಡೆದ ಈ ಘಟನೆಯಲ್ಲಿ ಬಿಹಾರ ಮೂಲದ ಪನ್ಪೂರಿ ಮಿಶ್ರಾ (28) ಎಂಬ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅಸಭ್ಯವಾಗಿ ವರ್ತಿಸಿದ್ದಾಳೆ. ಘಟನೆಯ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.
ವಿವರಗಳ ಪ್ರಕಾರ, ಗರ್ಭಿಣಿಯಾಗಿರುವ ಪನ್ಪೂರಿ ಮಿಶ್ರಾ ಸ್ಕೂಟಿಯಲ್ಲಿ ಆಸ್ಪತ್ರೆ ಕಡೆಗೆ ತೆರಳುತ್ತಿದ್ದ ಸಂದರ್ಭ, ಟ್ರಾಫಿಕ್‌ನಲ್ಲಿದ್ದಾಗ ಹಿಂದಿನಿಂದ ಒಂದು ಆಟೋ ಸ್ಕೂಟಿಗೆ ತುಳಿದಿದೆ. ಇದರಿಂದ ಕೋಪಗೊಂಡ ಮಹಿಳೆ ಆಟೋ ಚಾಲಕನೊಂದಿಗೆ ವಾದವಾಡಲು ಆರಂಭಿಸಿದಳು. ಮಾತಿಗೆ ಮಾತು ಬೆಳೆದು ಜಗಳ ಉಲ್ಬಣಗೊಂಡು, ಮಹಿಳೆ ತನ್ನ ಚಪ್ಪಲಿಯಿಂದ ಆಟೋ ಚಾಲಕನಿಗೆ ಹೊಡೆದಿದ್ದಾಳೆ.
ಘಟನೆಯ ವಿಡಿಯೋ ಕೂಡಲೇ ಹರಡಿದ್ದು, ಇದನ್ನು ಕಂಡ ಅನೇಕರು ಮಹಿಳೆಯ ದುರ್ವ್ಯವಹಾರವನ್ನು ಖಂಡಿಸಿದ್ದಾರೆ. ಮಹಿಳೆ ಎಂದು ಸಹಾನುಭೂತಿ ವ್ಯಕ್ತಪಡಿಸಿದರೂ, ಇತರರು ಸಾರ್ವಜನಿಕವಾಗಿ ಹೀಗೆ ವರ್ತಿಸುವುದು ನ್ಯಾಯವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪನ್ಪೂರಿ ಮಿಶ್ರಾ ಅವರನ್ನು ಪೊಲೀಸರು ವಿಚಾರಣೆಗಾಗಿ ಕರೆಸಿ ವಿವರಗಳನ್ನು ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಮಹಿಳೆ, “ಕೋಪದಿಂದ ಹೀಗೆ ವರ್ತಿಸಿದೆ,” ಎಂದು ಒಪ್ಪಿಕೊಂಡಿದ್ದಾಳೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…