Categories: Latest

ಅಂಕೋಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಪೆಟ್ರೋಲಿಯಂ ಟ್ಯಾಂಕರ್ – ಸಂಚಾರ ಸ್ಥಗಿತ

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಈ ಟ್ಯಾಂಕರ್ ಅಗಸೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾಗಿದೆ.

ಬೆಂಕಿಯ ಜ್ವಾಲೆಗಳು ಭೀಕರವಾಗಿ ಆವರಿಸಿದ್ದರಿಂದ ರಸ್ತೆಯ ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೂ ಬೆಂಕಿ ಹರಡಿದ್ದು, ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಯಲ್ಲಾಪುರ-ಹುಬ್ಬಳ್ಳಿ ಮಾರ್ಗದ ವಾಹನ ಸಂಚಾರವನ್ನು ಪೊಲೀಸರು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವಂತಾಗಿದೆ. ಸದ್ಯ ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆಯಿದೆ

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

11 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago