ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ ಆಹಾರ ಇಲಾಖೆ ಶಿರಸ್ತೇದಾರ್ ಪುಷ್ಪಲತಾ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ದಾಳಿ ನಡೆಸಿದರು.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅನ್ನಭಾಗ್ಯದ ನಾಲ್ಕು ಕ್ವಿಂಟಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ. ಈ
ಕುರಿತು ಗೋದಾಮು ಮಾಲೀಕರಿಗೆ ವಿಚಾರಿಸಿದಾಗ, ಅವರು ಹಾರಿಕೆಯ ಉತ್ತರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮತ್ತು ಆಹಾರ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದಂತೆ ಗೋದಾಮು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಹಾರ ಇಲಾಖೆ ಶಿರಸ್ತೇದಾರ್ ಪುಷ್ಪಲತಾ ತಿಳಿಸಿದರು.
ಗ್ರಾಮಾಂತರ ಠಾಣೆಯ ಪಿಎಸ್‌ಐ ರಮೇಶ್ ಗುಗ್ಗರಿ, ರಾಜಸ್ವ ನಿರೀಕ್ಷಕ ಖಾದರ್ ಹಾಗೂ ಆಹಾರ ಇಲಾಖೆ ಸಿಬ್ಬಂದಿ ಹಾಜರಿದ್ದರು.
ವರದಿ: ಅವಿನಾಶ್
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…
ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ…
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…