Latest

ರಾಜ್ಯದಲ್ಲಿ ಮತ್ತೊಬ್ಬ ಕೊರೋನಾ ಬಲಿ, ಹೊಸದಾಗಿ 61 ಪ್ರಕರಣಗಳು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಇಂದು ಮತ್ತೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಮರಣ ಸಂಖ್ಯೆ ಏಳಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಂದು 61 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 796ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 644 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 9.4ರಷ್ಟಿದೆ ಎಂದು ಇಲಾಖೆ ತಿಳಿಸಿದೆ.

ಪ್ರಸ್ತುತ ರಾಜ್ಯದಲ್ಲಿ 451 ಸಕ್ರಿಯ ಕೊರೋನಾ ಪ್ರಕರಣಗಳಿದ್ದು, ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಇಬ್ಬರನ್ನು ತೀವ್ರ ನಿಗಾ ಘಟಕ (ಐಸಿಯು)ಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಕೊರೋನಾ ಸೋಂಕು ಮತ್ತಷ್ಟು ವ್ಯಾಪಿಸುವ ಮುನ್ನ ಸೋಂಕಿನ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

13 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

17 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago