ಕಲಬುರಗಿ: ಸಾವಿರಾರು ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ ಲೋಖಂಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ರಾಹುಲ್ ಹೈದರಾಬಾದ್ ಎಂಬವರ ನ್ಯಾಯಾಲಯದ ಪ್ರಕರಣದಲ್ಲಿ ರಾಜಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಬಾಕಿ ಕೆಲಸ ಪೂರ್ಣಗೊಳಿಸುವುದಾಗಿ ಹೇಳಿ ಆರೋಪಿ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಅಲ್ಲದೆ, ನಗದು ಹಣದ ಜೊತೆಗೆ 9 ಸೀರೆಗಳು, 4 ಶರ್ಟ್‌ಗಳು, 4 ಜೀನ್ಸ್ ಪ್ಯಾಂಟ್‌ಗಳು, ಒಂದು ಜೋಡಿ ಶೂ, 4 ಮಹಿಳೆಯರ ಉಡುಪುಗಳು ಹಾಗೂ 6 ಜೋಡಿ ಮಹಿಳೆಯರ ಚಪ್ಪಲಿಗಳನ್ನು ನೀಡುವಂತೆಯೂ ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಅವರ ನೇತೃತ್ವದ ತಂಡ ನ್ಯಾಯಾಲಯ ಸಂಕೀರ್ಣದ ಸಮೀಪ ಬಲೆ ಬೀಸಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಆರೋಪಿ ₹10 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು.
ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಯ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…