Categories: Latest

ಅಕ್ರಮವಾಗಿ ಗಾಂಜಾ ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ.

ಕೋಲಾರ ಗ್ರಾಮಾಂತರ ಪೊಲೀಸರಿಗೆ ಬಾತ್ಮಿದಾರರದಿಂದ ಬಂದ ಮಾಹಿತಿ ಮೇರೆಗೆ , ಕೋಲಾರ – ಶ್ರೀನಿವಾಸಪುರ ರಸ್ತೆಯಲ್ಲಿರುವ ಮಹರ್ಷಿ ಶಾಲೆಯ ಮುಂಭಾಗ ಒಬ್ಬ ವ್ಯಕ್ತಿಯು ಬ್ಯಾಗನ್ನು ಟಿ.ವಿಎಸ್. XL 100. ಸಂಖ್ಯೆ AP 03 BZ 0930 ದ್ವಿಚಕ್ರ ವಾಹನದಲ್ಲಿ ಗಂಜಾ ಇಟ್ಟುಕೊಂಡಿರುವುದು ಕಂಡು ಬಂದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆಸಾಮಿಯನ್ನ ವಶಕ್ಕೆ ಪಡೆದು ಅವನ ಹೆಸರು ಮತ್ತು ವಿಳಾಸ ವಿಚಾರಿಸಿದಾಗ ಶ್ರೀನಿವಾಸ ಅಲಿಯಾಸ್ ಶ್ರೀನಿವಾಸಲು ಬಿನ್ ಹನುಮಂತಪ್ಪ ವಯಸ್ಸು 45 ವರ್ಷ, ವಾಸ ಬಾಗೇಪಲ್ಲಿ ಗ್ರಾಮ ಪುಂಗನೂರು ತಾಲ್ಲೂಕು, ಎಂದು ತನ್ನ ಬಳಿ ಇದ್ದ ಗಾಂಜಾವನ್ನು ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ಪರಿಶೀಲನೆ ಮಾಡಿದಾಗ ಒಂದು ಪೇಪರ್ ನಲ್ಲಿ ಅಂದಾಜು 1,50, 000/- ಸಾವಿರ ರೂ ಬೆಳೆ ಬಾಳುವ ಗಾಂಜಾ ಹಾಗೂ ಡಿಜಿಟಲ್ ಮಾಪನ ಇರುವುದು ಪತ್ತೆಯಾಗಿದೆ, ಅರೋಪಿ ಮತ್ತು ಮಾಲು ಹಾಗೂ TVS XL100 ದ್ವಿಚಕ್ರ ವಾಹನವನ್ನು ಪೋಲಿಸರು ವಶಕ್ಕೆ ಪಡೆದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖೀಲ್ ಬಿ ಐಪಿಎಸ್‌ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಶ್ರವಿಶಂಕರ್ ಮತ್ತು ಶ್ಜಗದೀಶ್ ರವರ ಮಾರ್ಗದರ್ಶನದಲ್ಲಿ ಎಂ.ಹೆಚ್. ನಾಗ್ತೆ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ ವಿಭಾಗ ರವರ ನೇತೃತ್ವದಲ್ಲಿ ಪಿ.ಐ ಕಾಂತ್ ರಾಜ್ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ರವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಷನ್ ಜಮೀರ್

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago