Latest

ಶ್ರೀಗಂಧ ಮರಗಳ್ಳನ ಬಂಧನ; ಮರದ ತುಂಡುಗಳು ವಶಕ್ಕೆ ಪಡೆದ ಕೋಲಾರ ಪೊಲೀಸರು.

ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಂದ ಗುಪ್ತ ಮಾಹಿತಿಯೊಂದಿಗೆ ಮಿಂಚಿನ ಕಾರ್ಯಚರಣೆ ನಡೆಸಿ, ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಆರೋಪಿ ಬಂಧಿಸಿ ಅವನಿಂದ 15 ಕೆ.ಜಿ ತೂಕದ ಶ್ರೀಗಂಧ ಮರದ ತುಂಡುಗಳು ವಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸಾದ್.ವಿ ಸುಗಟೂರು ಹೋಬಳಿಯ ತಮ್ಮ ತೋಟದ ಸುತ್ತಲೂ ಸುಮಾರು 200 ಶ್ರೀಗಂಧದ ಮರಗಳನ್ನು ಬೆಳೆಸಿದ್ದರು, ಮರಗಳು ಸುಮಾರು 26 ಅಡಿಗಳ ಉದ್ದ, ದಪ್ಪ 1.4 ಅಡಿಗಳಿದ್ದು ದಿನಾಂಕ 23-07-2024 ರಂದು ಮಧ್ಯರಾತ್ರಿಯ ಸಮಯದಲ್ಲಿ ನಾಯಿಗಳು ಸದ್ದು ಮಾಡುತ್ತಿದ್ದನ್ನು ಕಂಡು, ಮನೆಯಿಂದ ಹೊರಗಡೆ ಬಂದು ನೋಡಿದಾಗ ಮನೆಯ ಪಕ್ಕದಲ್ಲಿ ತಮ್ಮ ತೋಟದಲ್ಲಿರುವಂತಹ ಶ್ರೀಗಂಧದ ಮರಗಳ ಪೈಕಿ 5 ಮರಗಳು ಕಡಿದು ಕಳ್ಳರು ಕಳವು ಮಾಡಿದ್ದು, ಉಳಿದ ಸುಮಾರು 6 ಮರಗಳಿಗೆ ರಂಪದಲ್ಲಿ ಸ್ವಲ್ಪಮಟ್ಟಿಗೆ ಕೊಯ್ದು ಪರಾರಿಯಾಗಿದ್ದಾರೆ. ಕೊಡಲೇ ಶ್ರೀಗಂಧ ಮರಗಳ ಕಳ್ಳತನದ ದೂರನ್ನು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ .ಬಿ ಐ.ಪಿ.ಎಸ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ಕೋಲಾರ ಉಪವಿಭಾಗದ ಪೋಲಿಸ್ ಉಪಾಧೀಕ್ಷಕರಾದ ಎಂ.ಹೆಚ್.ನಾಗ್ಲೆ ರವರ
ಮುಂದಾಳತ್ವದಲ್ಲಿ ಕಾಂತರಾಜ.ಕೆ ಪೊಲೀಸ್ ಇನ್ಸಪೆಕ್ಟ‌ರ್ ಮತ್ತು ಅವರ ತಂಡದ ಸಾಧಿಕ್ ಪಾಷ, ರಾಜೇಶ್, ಹಾಗೂ ಜಿಲ್ಲಾ ಅಪರಾಧ ಪತ್ತೆದಳ ಸಿಬ್ಬಂದಿಯಾದ ರಾಘವೇಂದ್ರ, ಆಂಜಿನಪ್ಪ, ನವೀನ್, ಸತೀಶ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಮುರಳಿ ರವರು ಹಲವಾರು ಗುಪ್ತ ಮಾಹಿತಿಯೊಂದಿಗೆ ಮಾಹಿತಿ ಕಲೆಹಾಕಿ ಆರೋಪಿಯಾದ ವೆಂಕಟರಮಣಪ್ಪ 50 ವರ್ಷ, ಉಪ್ಪಾರಪಲ್ಲಿ ಗ್ರಾಮ, ಲಕ್ಷ್ಮೀಪುರ ಪಂಚಾಯ್ತಿ, ಶ್ರೀನಿವಾಸಪುರ ತಾಲ್ಲೂಕು, ಎಂಬ ಆರೋಪಿಯಿಂದ ಮಾಲು ಸಮೇತ ಕೋಲಾರ-ಶ್ರೀನಿವಾಸಪುರ ರಸ್ತೆಯ ಮೂರಾಂಡಹಳ್ಳಿ ಕ್ರಾಸ್ ಬಳಿ ಬಂಧಿಸಿ ಇತನಿಂದ ಸುಮಾರು 50,000 ರೂ. ಬೆಲೆ ಬಾಳುವ 15 ಕೆ.ಜಿ ತೂಕದ ಶ್ರೀಗಂಧ ಮರದ ತುಂಡುಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಪಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago