Latest

ಲಿಂಗಸುಗೂರು: ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ; ಇಬ್ಬರು ಕೃಷಿ ಅಧಿಕಾರಿಗಳು ಅಮಾನತು.

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಅಮಾನತುಗೊಂಡ ಅಧಿಕಾರಿಗಳಲ್ಲಿ ಸಹಾಯಕ ಕೃಷಿ ನಿರ್ದೇಶಕಿ ನಾಗರತ್ನ ಹುಲಿಕೋಟಿ ಮತ್ತು ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರಿದ್ದಾರೆ. ಈ ಇಬ್ಬರು ಅಧಿಕಾರಿಗಳು 2024-25ನೇ ಸಾಲಿನ ನರೇಗಾ ಯೋಜನೆಯಡಿ ಜಮೀನುಗಳಿಗೆ ಬದು ನಿರ್ಮಾಣ ಮಾಡದೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸುಮಾರು ಎರಡು ಕೋಟಿ ರೂಪಾಯಿಯ ಅವ್ಯವಹಾರ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಈ ಹಗರಣದ ಬಗ್ಗೆ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಚರ್ಚೆ ನಡೆದಿದ್ದು, ನಂತರದ ತನಿಖೆಯಲ್ಲಿ ಈ ಅಧಿಕಾರಿಗಳ ನೇರ ಭಾಗವಹಿಸುವಿಕೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ವರದಿ ಆಧಾರದ ಮೇಲೆ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಇಂದ್ರ ಅವರು ಇಬ್ಬರ ಅಮಾನತು ಆದೇಶ ಹೊರಡಿಸಿದ್ದಾರೆ.

ಈ ಅವ್ಯವಹಾರದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿರುವುದರಿಂದ ಇನ್ನಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

39 minutes ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago