ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್‌ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ಆರಂಭವಾಗಿದೆ ಎನ್ನಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡು ನಿಯಂತ್ರಣ ತಪ್ಪುತ್ತಿದ್ದಂತೆ ಎಎಸ್‌ಐ ತಮ್ಮ ಸರ್ವಿಸ್ ರಿವಾಲ್ವರ್ ಹೊರತೆಗೆದು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎಎಸ್‌ಐ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಗ್ರಾಮಸ್ಥರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಯಾದವ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಬಳಿಕ ಬಲಿರಾಜ್‌ಗಢ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಎಸ್‌ಐ ಯಾವ ಪರಿಸ್ಥಿತಿಯಲ್ಲಿ ಗುಂಡು ಹಾರಿಸಿದರು? ಗ್ರಾಮಸ್ಥರು ಮತ್ತು ಪೊಲೀಸ್ ಅಧಿಕಾರಿಯ ನಡುವೆ ನಡೆದ ಸಂಘರ್ಷಕ್ಕೆ ನಿಖರ ಕಾರಣವೇನು? ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಪ್ರೇಯಸಿಯ ಮನೆಗೆ ತೆರಳಿದ್ದ ಪೊಲೀಸ್ ಅಧಿಕಾರಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಬಳಿಕ ಸರ್ವಿಸ್ ರಿವಾಲ್ವರ್‌ನಿಂದ ನಡೆದ ಗುಂಡಿನ ದಾಳಿಗೆ ಓರ್ವನ ಜೀವವೇ ಬಲಿಯಾಗಿದೆ. ಬಿಹಾರದಲ್ಲಿ ನಡೆದ ಈ ಘಟನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

Related News

error: Content is protected !!