ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್‌ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ಆರಂಭವಾಗಿದೆ ಎನ್ನಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡು ನಿಯಂತ್ರಣ ತಪ್ಪುತ್ತಿದ್ದಂತೆ ಎಎಸ್‌ಐ ತಮ್ಮ ಸರ್ವಿಸ್ ರಿವಾಲ್ವರ್ ಹೊರತೆಗೆದು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎಎಸ್‌ಐ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಗ್ರಾಮಸ್ಥರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಯಾದವ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಬಳಿಕ ಬಲಿರಾಜ್‌ಗಢ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಎಸ್‌ಐ ಯಾವ ಪರಿಸ್ಥಿತಿಯಲ್ಲಿ ಗುಂಡು ಹಾರಿಸಿದರು? ಗ್ರಾಮಸ್ಥರು ಮತ್ತು ಪೊಲೀಸ್ ಅಧಿಕಾರಿಯ ನಡುವೆ ನಡೆದ ಸಂಘರ್ಷಕ್ಕೆ ನಿಖರ ಕಾರಣವೇನು? ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಪ್ರೇಯಸಿಯ ಮನೆಗೆ ತೆರಳಿದ್ದ ಪೊಲೀಸ್ ಅಧಿಕಾರಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಬಳಿಕ ಸರ್ವಿಸ್ ರಿವಾಲ್ವರ್‌ನಿಂದ ನಡೆದ ಗುಂಡಿನ ದಾಳಿಗೆ ಓರ್ವನ ಜೀವವೇ ಬಲಿಯಾಗಿದೆ. ಬಿಹಾರದಲ್ಲಿ ನಡೆದ ಈ ಘಟನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ರಾಜಸ್ಥಾನ: ಜಿಮ್‌ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…
ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ…
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…
ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು (MVS) ಯೋಜನೆಯ ಕಾಮಗಾರಿಯನ್ನು ಉತ್ತರ…