ಇಂಡಿ ತಾಲ್ಲೂಕಿನ ಲೋಣಿ (ಬಿ.ಕೆ.) ಗ್ರಾಮದಲ್ಲಿ ಸರ್ಕಾರಿ ರಸ್ತೆ ಅಳತೆ ಮಾಡಲು ತೆರಳಿದ್ದ ಭೂಮಾಪಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.
ಸರ್ಕಾರಿ ರಸ್ತೆ ಅಳತೆ ವೇಳೆ ಹಲ್ಲೆ
ಚಡಚಣ ತಹಶೀಲ್ದಾರ್ ಆದೇಶದಂತೆ, ಭೂಮಾಪನ ಇಲಾಖೆಯ ಮಹಾಂತಪ್ಪ ಶ್ರೀಶೈಲ ಸಜ್ಜನ ಅವರು ಸರ್ವೇ ನಂ. 341 ಮತ್ತು 342ರಲ್ಲಿ ಸರ್ಕಾರಿ ರಸ್ತೆಯ ಅಳತೆ ಮಾಡಲು ಸ್ಥಳಕ್ಕೆ ತೆರಳಿದ್ದರು. ಅಳತೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ಗ್ರಾಮದ ವಿಕಾಸ ಕಲ್ಲಣ್ಣಗೌಡ ಪಾಟೀಲ, ರವೀಂದ್ರ ಗುರಪ್ಪ ಕಾಂಬ್ಳೆ, ಸಿದ್ದರಾಮ ಗಿರಮಲ್ಲ ಉಟಗಿ, ವಿಕಾಸ ಜೀವಪ್ಪ ಕಾಂಬಳೆ ಹಾಗೂ ಇತರರು ಆಕ್ಷೇಪ ವ್ಯಕ್ತಪಡಿಸಿ, ಅಳತೆಯನ್ನು ತಡೆಹಿಡಿಯಲು ಯತ್ನಿಸಿದರು.
ಇದರೊಂದಿಗೆ ಅವರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಶಾರೀರಿಕ ಮತ್ತು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಭೂಮಾಪನ ಇಲಾಖೆಯ ಆಕ್ರೋಶ, ಸರ್ಕಾರದ ಮಧ್ಯಸ್ಥಿಕೆ ಅಗತ್ಯ ಈ ಘಟನೆಯ ವಿರುದ್ಧ ಭೂಮಾಪನ ಇಲಾಖೆಯ ಸಿಬ್ಬಂದಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…