ಬೆಳಗಾವಿ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು) ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೌಲ್ಯಮಾಪನ ಅಧ್ಯಯನದ ಭಾಗವಾಗಿ ಸಂತ್ರಸ್ತರೊಂದಿಗೆ ವಿಶೇಷ ಗುಂಪು ಚರ್ಚೆ ನಡೆಯಿತು.
ಬೆಳಗಾವಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ದೌರ್ಜನ್ಯ ತಡೆ ಕಾಯಿದೆಯ ಪರಿಣಾಮಕಾರಿತ್ವ, ಸಂತ್ರಸ್ತರಿಗೆ ದೊರೆಯುತ್ತಿರುವ ಸರ್ಕಾರಿ ಸೌಲಭ್ಯಗಳು, ಪರಿಹಾರ ಹಾಗೂ ಕಾನೂನು ನೆರವು ಸೇರಿದಂತೆ ವಿವಿಧ ವಿಚಾರಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಚನ್ನಯ್ಯನವರ್, ಪತ್ರಾಂಕಿತ ವ್ಯವಸ್ಥಾಪಕ ಎಂ.ಬಿ. ಹೊಸಮನಿ, ಡಿಸಿಆರ್‌ಇ (DCIR) ಪೊಲೀಸ್ ಇಲಾಖೆಯ ಅಧಿಕಾರಿ ರಂಜಿತ್ ಗಿಲ್ ಹಾಗೂ ವಕೀಲ ಎ.ಡಿ. ಕೋಳಿ ಭಾಗವಹಿಸಿದ್ದರು. ಅಧಿಕಾರಿಗಳು ಮತ್ತು ವಕೀಲರು ಸಂತ್ರಸ್ತರ ಅಹವಾಲುಗಳನ್ನು ಆಲಿಸಿ, ಕಾಯಿದೆಯ ಅನುಷ್ಠಾನಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಮಾಹಿತಿ ನೀಡಿದರು.
ನೈರುತ್ಯ ಆರ್ಟ ಮೀಡಿಯಾ ಸಂಸ್ಥೆಯ ಬೆಳಗಾವಿ ಪ್ರತಿನಿಧಿ ವೈಶಾಲಿ (ಗೀತಾ) ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ರಾಜಶೇಖರ್ ಲಟ್ಟಿ, ಮೋಹನ್ ದುಗಾಡೆ ಹಾಗೂ ಪ್ರಜ್ವಲ್ ಕೋಲಕರ ಸೇರಿದಂತೆ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಂತ್ರಸ್ತರ ಅನುಭವಗಳು, ಸಮಸ್ಯೆಗಳು ಹಾಗೂ ಅವರಿಗೆ ದೊರೆಯುತ್ತಿರುವ ನೆರವಿನ ಕುರಿತು ನೇರವಾಗಿ ಮಾಹಿತಿ ಸಂಗ್ರಹಿಸುವ ಮೂಲಕ ಕಾಯಿದೆಯ ಅನುಷ್ಠಾನದ ವಾಸ್ತವ ಸ್ಥಿತಿಯನ್ನು ಮೌಲ್ಯಮಾಪನ ಮಾಡುವ ಉದ್ದೇಶದಿಂದ ಈ ಗುಂಪು ಚರ್ಚೆ ನಡೆಸಲಾಯಿತು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ (ಎನ್‌ಎಚ್‌ಎಐ) ವಿಶೇಷ ಭೂಸ್ವಾಧೀನಾಧಿಕಾರಿ…