ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಘಟನೆ ಸಂಚಲನ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪ್ರೊಫೆಸರ್ ಅಬ್ದುಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತರಗತಿ ನಡೆಯುತ್ತಿದ್ದ ವೇಳೆ ವೇದಿಕೆಯ ಮೇಲೆ ಮೈಕ್ ಹಿಡಿದು ನಿಂತಿದ್ದ ಅಬ್ದುಲ್, ವಿದ್ಯಾರ್ಥಿನಿಯೊಬ್ಬಳಿಗೆ ಚಾಕೋಲೆಟ್ ನೀಡಿ ಪ್ರಪೋಸ್ ಮಾಡಿದ್ದಾನೆ. ಈ ನಡೆಗೆ ಆ ವಿದ್ಯಾರ್ಥಿನಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರಶ್ನಿಸಿದ್ದಾಳೆ. ಇದಕ್ಕೆ ಪ್ರತಿಯಾಗಿ, ಆಕೆ ಮೊದಲೇ ತನ್ನ ಚೇಂಬರ್‌ಗೆ ಬಂದು ಪ್ರಪೋಸ್ ಮಾಡಿದ್ದಳು ಎಂದು ಎಲ್ಲರ ಮುಂದೆಯೇ ಹೇಳಿಕೊಂಡು, ತನ್ನ ಬಳಿ ಸಿಸಿಟಿವಿ ಸಾಕ್ಷ್ಯ ಇದೆ ಎಂದು ಅಬ್ದುಲ್ ವಾದಿಸಿದ್ದಾನೆ.
ಈ ಘಟನೆ ಬಳಿಕ ವಿದ್ಯಾರ್ಥಿನಿ ಪ್ರಿನ್ಸಿಪಾಲ್‌ಗೆ ದೂರು ನೀಡುವುದಾಗಿ ಹೇಳಿ ವಿರೋಧ ವ್ಯಕ್ತಪಡಿಸಿದ್ದಾಳೆ. ಕಾಲೇಜು ಆಡಳಿತ ಮಂಡಳಿ ಕೂಡ ತಕ್ಷಣವೇ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದೆ. ಅದರ ಆಧಾರದ ಮೇಲೆ ಕ್ರೈಂ ನಂ. 79 ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 74, 75 ಮತ್ತು 329(3) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದೇ ರೀತಿಯ ವರ್ತನೆಗಾಗಿ ಅಬ್ದುಲ್ ವಿರುದ್ಧ ಈ ಹಿಂದೆ ಕೂಡ ಆರೋಪಗಳು ಕೇಳಿಬಂದಿದ್ದು, ತುಮಕೂರು ಕಾಲೇಜಿನಿಂದ ಅವರನ್ನು ಹೊರಹಾಕಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮತ್ತೆ ಇಂತಹ ಕೃತ್ಯ ಎಸಗಿದ ಕಾರಣ ವಿದ್ಯಾರ್ಥಿಗಳು ಆಕ್ರೋಶಗೊಂಡು ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…