Crime

ಎಟಿಎಂ ಸಿಬ್ಬಂದಿ ಕೊಲೆ ಮತ್ತು ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಇಬ್ಬರು ಖದೀಮರು ಲಾಕ್!

ಬೀದರ್: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಎಟಿಎಂ ಸಿಬ್ಬಂದಿ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಹೈದರಾಬಾದ್‌ನಲ್ಲಿ ಇಬ್ಬರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ತೀವ್ರ ಕಾರ್ಯಾಚರಣೆ:
ಘಟನೆ ಬಳಿಕ 9 ತಂಡಗಳನ್ನು ರಚಿಸಿದ್ದ ಪೊಲೀಸರು ಹಂತಕರನ್ನು ಬೆನ್ನಟ್ಟಿದರು. ಚೇಸಿಂಗ್ ಮೂಲಕ ಹೈದರಾಬಾದ್‌ನಲ್ಲಿ ಅವರನ್ನು ಹಿಡಿದಿದ್ದಾರೆ. ಬಂಧನದ ವೇಳೆ ಅಫ್ಜಲ್ಗಂಜ್ ಪ್ರದೇಶದ ಟ್ರಾವಲ್ ಏಜೆನ್ಸಿಗೆ ನುಗ್ಗಿದ ಖದೀಮರು, ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಈ ವೇಳೆ ಗುಂಡು ಮಿಸ್ ಆಗಿ ಟ್ರಾವಲ್ ಏಜೆನ್ಸಿ ಸಿಬ್ಬಂದಿಯೊಬ್ಬರಿಗೆ ತಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಘಟನೆ ವಿವರ:
ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಗೆ ಕಾರದ ಪುಡಿ ಎರಚಿ, ಇಬ್ಬರು ದರೋಡೆಕೋರರು 5-6 ಸುತ್ತು ಗುಂಡು ಹಾರಿಸಿ, ₹83 ಲಕ್ಷ ಹಣದ ಪೆಟ್ಟಿಗೆಯನ್ನು ಕಸಿದು ಪರಾರಿಯಾಗಿದ್ದರು. ಶಂಕಿತರು ಅಂತಾರಾಜ್ಯ ಗ್ಯಾಂಗ್‌ನ ಭಾಗವಾಗಿದ್ದಾರೆ ಎಂದು ಅನುವಾದಿಸಲಾಗಿತ್ತು.

ಬಂಧನ ವಿವರ:
ಅಫ್ಜಲ್ಗಂಜ್ ಮತ್ತು ಬೀದರ್ ಪೊಲೀಸರ ಜಂಟಿ ಕಾರ್ಯಾಚರಣೆಯ ಮೂಲಕ ದರೋಡೆಕೋರರನ್ನು ಹಿಡಿಯಲಾಗಿದೆ. ಅವರು ₹83 ಲಕ್ಷ ದೋಚಿದ ನಂತರ ಹೈದರಾಬಾದ್‌ನಿಂದ ರಾಯ್ಪುರಕ್ಕೆ ಬಸ್ ಬುಕಿಂಗ್ ಮಾಡಿದ್ದ ಮಾಹಿತಿ ತಿಳಿದು, ಅದರ ಆಧಾರದ ಮೇಲೆ ಬಂಧಿಸಿದ್ದಾರೆ.

ಪೊಲೀಸರ ಈ ತ್ವರಿತ ಕಾರ್ಯಾಚರಣೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆ ಪಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

39 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago