Latest

ಅಂದರ್-ಬಾಹರ್ ಜೂಜಾಟದ ಅಡ್ಡೆ ಮೇಲೆ ದಾಳಿ ; 04 ಜನರ ಬಂಧನ.

ಮುಳಬಾಗಿಲು ಗ್ರಾಮಾಂತರ ಪೊಲೀಸರಿಂದ ದಿನಾಂಕ 03-01-2025 ರಂದು ಮಧ್ಯಾಹ್ನ ಸೊನ್ನವಾಡಿ ಗ್ರಾಮದ ಸರ್ಕಾರಿ ಜಾಗದಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳ ಮುಖಾಂತರ ಅಂದರ್-ಬಾಹರ್ ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿ.ಎಸ್.ಐ. ವಿಠಲ್ ವೈ. ತಳವಾ‌ರ್ ಹಾಗೂ ಅವರ ಸಿಬ್ಬಂದಿ ಅನಿಲ್ ಕುಮಾರ್, ಮಂಜುನಾಥ ರೆಡ್ಡಿ, ಶಂಕರಪ್ಪ, ಶ್ರೀನಾಥ್ ರವರು ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಮುಳಬಾಗಿಲು ನಿವಾಸಿಗಳಾದ ನಾಗರಾಜ, ಆನಂದ, ರಾಜೇಶ ಮತ್ತು ಹರೀಶ್ ಕುಮಾರ್ ರವರನ್ನು ಬಂಧಿಸಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಒಟ್ಟು 6100/-ರೂ. ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡು ಕಾನೂನು ಕೈಗೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago