ಮುಳಬಾಗಿಲು ಗ್ರಾಮಾಂತರ ಪೊಲೀಸರಿಂದ ದಿನಾಂಕ 03-01-2025 ರಂದು ಮಧ್ಯಾಹ್ನ ಸೊನ್ನವಾಡಿ ಗ್ರಾಮದ ಸರ್ಕಾರಿ ಜಾಗದಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳ ಮುಖಾಂತರ ಅಂದರ್-ಬಾಹರ್ ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿ.ಎಸ್.ಐ. ವಿಠಲ್ ವೈ. ತಳವಾರ್ ಹಾಗೂ ಅವರ ಸಿಬ್ಬಂದಿ ಅನಿಲ್ ಕುಮಾರ್, ಮಂಜುನಾಥ ರೆಡ್ಡಿ, ಶಂಕರಪ್ಪ, ಶ್ರೀನಾಥ್ ರವರು ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಮುಳಬಾಗಿಲು ನಿವಾಸಿಗಳಾದ ನಾಗರಾಜ, ಆನಂದ, ರಾಜೇಶ ಮತ್ತು ಹರೀಶ್ ಕುಮಾರ್ ರವರನ್ನು ಬಂಧಿಸಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಒಟ್ಟು 6100/-ರೂ. ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡು ಕಾನೂನು ಕೈಗೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವರದಿ: ರೋಶನ್ ಜಮೀರ್
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…