ಆಂಡರಸನ್‌ಪೇಟೆ ಪೊಲೀಸರು ಕರ್ತವ್ಯ ನಿರತ ಲೈನ್‌ಮನ್ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪೊಗರಪಲ್ಲಿ ನಿವಾಸಿ ಜ್ಞಾನೇಂದ್ರ ರೆಡ್ಡಿಯನ್ನು ಸೋಮವಾರ ಬಂಧಿಸಿದ್ದಾರೆ.
ಮೇ 21ರಂದು ಗುಡಿಬಂಡೆ ತಾಲ್ಲೂಕಿನ ಕೆಂಪಾಪುರ ಗ್ರಾಮದಲ್ಲಿ ಲೈನ್‌ಮನ್ ವೆಂಕಟರಾಮ ಅವರು ಮನೆ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದ ಬೈಕ್ ಅನ್ನು ತೆರವಿಗೆ ಹಾಕುವಂತೆ ಅವರು ಬೈಕ್ ಸವಾರ ಜ್ಞಾನೇಂದ್ರ ರೆಡ್ಡಿಗೆ ವಿನಂತಿಸಿದ್ದರಿಂದ ಮಾತಿನ ಚಕಮಕಿ ಉಂಟಾಗಿ, ವಾಗ್ವಾದ ಉಲ್ಬಣವಾಗಿ ಹಲ್ಲೆಗೆ ಕಾರಣವಾಗಿದೆ.
ಘಟನೆ ನಡೆದಾಗಿನಿಂದ ಐದು ದಿನಗಳ ಕಾಲ ಆರೋಪಿಯನ್ನು ಬಂಧಿಸದಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಬೆಸ್ಕಾಂ ಲೈನ್‌ಮನ್‌ಗಳ ಸಂಘ ಹಾಗೂ ದಲಿತ ಹಿತ ರಕ್ಷಣಾ ಸಂಘಟನೆಗಳು ಸೋಮವಾರ ಆಂಡರಸನ್‌ಪೇಟೆ ಪೊಲೀಸ್ ಠಾಣೆ ಎದುರು ಧರಣಿಗೆ ಸಜ್ಜಾಗಿದ್ದವು.
ಸಂಘಟನೆಗಳ ಒತ್ತಡದ ನಡುವೆಯೇ ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…