ಹುಬ್ಬಳ್ಳಿಯ ಹೊಸೂರಿನ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಚಟುವಟಿಕೆ ಮೇಲೆ ಶುಕ್ರವಾರ ಪೊಲೀಸರು ಧಡೆ ನಡೆಸಿ ಐವರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ.

ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಯಂತ ಗೌಳಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ದಾಳೆಯಲ್ಲಿ ಹೋಟೆಲ್ ವ್ಯವಸ್ಥಾಪಕ, ಸಿಬ್ಬಂದಿ ಹಾಗೂ ಗ್ರಾಹಕರೊಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಅಡಗಿನ ಕೋಣೆ, ಸುರಂಗ ಮಾರ್ಗ ಪತ್ತೆ:

ಪಾರಿಜಾತ ರೆಸಿಡೆನ್ಸಿಯ ನೆಲಮಹಡಿ ಹಾಗೂ ಮೊದಲ ಮಹಡಿಯನ್ನು ಗ್ರಾಹಕರಿಗೆ ಮೀಸಲಿಟ್ಟಿದ್ದರೆ, ಎರಡನೇ ಮಹಡಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆಯ ವೇಳೆ, ಕೊಠಡಿಗಳಲ್ಲಿದ್ದ ಸಾವಿರಾರು ತಮಿಳುನಾಡು ಆರೋಗ್ಯ ಇಲಾಖೆ ವಿತರಿಸುವ ಕಾಂಡೋಮ್‌ಗಳು ಸಿಕ್ಕಿವೆ. ಹೆಚ್ಚಿನ ದಾಖಲೆಗಳನ್ನು ಮರೆಮಾಚಲು ಶೌಚಾಲಯದ ಒಳಗೆ ಅಡಗುತಾಣ ಹಾಗೂ ಸುರಂಗ ಮಾರ್ಗವನ್ನೂ ಬಳಕೆ ಮಾಡಲಾಗುತ್ತಿತ್ತು.

ದಾಳಿಯ ಸಮಯದಲ್ಲಿ ಗ್ರಾಹಕರೊಬ್ಬರು ಶೌಚಾಲಯದ ಒಳಗಿನ ಅಡಗು ಸ್ಥಳದಲ್ಲಿ ಅಡಗಿಕೊಂಡಿರುವುದು ಪತ್ತೆಯಾಗಿದೆ. ಶಾಲೆ ಹಾಗೂ ಆಸ್ಪತ್ರೆ ಸಮೀಪವೇ ಇಂತಹ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನುಂಟುಮಾಡಿದೆ. ಈ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹಾಗೂ ಮಕ್ಕಳ ಹಕ್ಕು ಆಯೋಗದ ಜಿಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಟ್ಯಾನಿ ಹೇಳಿದರು.

ಆರೋಪಿಗಳ ವಿರುದ್ಧ ಕಾನೂನು ಕ್ರಮ:

ವೇಶ್ಯಾವಾಟಿಕೆಗೆ ಸಂಬಂಧಿಸಿದಂತೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ರಕ್ಷಿಸಲ್ಪಟ್ಟ ಮಹಿಳೆಯರು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

error: Content is protected !!