ಹುಬ್ಬಳ್ಳಿಯ ಹೊಸೂರಿನ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಚಟುವಟಿಕೆ ಮೇಲೆ ಶುಕ್ರವಾರ ಪೊಲೀಸರು ಧಡೆ ನಡೆಸಿ ಐವರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಯಂತ ಗೌಳಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ದಾಳೆಯಲ್ಲಿ ಹೋಟೆಲ್ ವ್ಯವಸ್ಥಾಪಕ, ಸಿಬ್ಬಂದಿ ಹಾಗೂ ಗ್ರಾಹಕರೊಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಅಡಗಿನ ಕೋಣೆ, ಸುರಂಗ ಮಾರ್ಗ ಪತ್ತೆ:
ಪಾರಿಜಾತ ರೆಸಿಡೆನ್ಸಿಯ ನೆಲಮಹಡಿ ಹಾಗೂ ಮೊದಲ ಮಹಡಿಯನ್ನು ಗ್ರಾಹಕರಿಗೆ ಮೀಸಲಿಟ್ಟಿದ್ದರೆ, ಎರಡನೇ ಮಹಡಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆಯ ವೇಳೆ, ಕೊಠಡಿಗಳಲ್ಲಿದ್ದ ಸಾವಿರಾರು ತಮಿಳುನಾಡು ಆರೋಗ್ಯ ಇಲಾಖೆ ವಿತರಿಸುವ ಕಾಂಡೋಮ್‌ಗಳು ಸಿಕ್ಕಿವೆ. ಹೆಚ್ಚಿನ ದಾಖಲೆಗಳನ್ನು ಮರೆಮಾಚಲು ಶೌಚಾಲಯದ ಒಳಗೆ ಅಡಗುತಾಣ ಹಾಗೂ ಸುರಂಗ ಮಾರ್ಗವನ್ನೂ ಬಳಕೆ ಮಾಡಲಾಗುತ್ತಿತ್ತು.
ದಾಳಿಯ ಸಮಯದಲ್ಲಿ ಗ್ರಾಹಕರೊಬ್ಬರು ಶೌಚಾಲಯದ ಒಳಗಿನ ಅಡಗು ಸ್ಥಳದಲ್ಲಿ ಅಡಗಿಕೊಂಡಿರುವುದು ಪತ್ತೆಯಾಗಿದೆ. ಶಾಲೆ ಹಾಗೂ ಆಸ್ಪತ್ರೆ ಸಮೀಪವೇ ಇಂತಹ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನುಂಟುಮಾಡಿದೆ. ಈ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹಾಗೂ ಮಕ್ಕಳ ಹಕ್ಕು ಆಯೋಗದ ಜಿಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಟ್ಯಾನಿ ಹೇಳಿದರು.
ಆರೋಪಿಗಳ ವಿರುದ್ಧ ಕಾನೂನು ಕ್ರಮ:
ವೇಶ್ಯಾವಾಟಿಕೆಗೆ ಸಂಬಂಧಿಸಿದಂತೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ರಕ್ಷಿಸಲ್ಪಟ್ಟ ಮಹಿಳೆಯರು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಅಮೀನಾ ಕೊಳೂರ ಅವರನ್ನು ಕರ್ತವ್ಯ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಗೃಹಿಣಿಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ. ಆಸ್ಪತ್ರೆ ಸಿಬ್ಬಂದಿಯ…
ಧರ್ಮಸ್ಥಳ, ದಕ್ಷಿಣ ಕನ್ನಡ: ಧರ್ಮಸ್ಥಳ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ನೀಡಿದ ಅಹವಾಲಿನ ನಂತರ, "ನಾನು ಹಲವಾರು ಮೃತದೇಹಗಳನ್ನು ಹೂತುಹಾಕಿದ್ದೇನೆ" ಎಂಬ…
ನಾರಾಯಣಪೇಟೆ, ಜುಲೈ 29 – “ಅಪ್ಪಾ ಬೇಡಪ್ಪಾ, ನನ್ನ ಹತ್ತಿರ ಬರಬೇಡಿ” ಎಂದು ಕಿರುಚಿದರೂ, ತಂದೆಯ ಕರುಣೆ ಚಾಚಲಿಲ್ಲ. ಮದ್ಯದ…
ದಾವಣಗೆರೆ: ಕಡಿಮೆ ಬೆಲೆಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಂದ ₹5 ಲಕ್ಷ ವಂಚಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹದಡಿ…
ಬೆಂಗಳೂರು, ಜುಲೈ 30: ಮಾಜಿ ಸಂಸದ ಹಾಗೂ ಜೆಡಿಎಸ್ ನಾಯಕಿ ಕುಟುಂಬದ ಸದಸ್ಯನಾದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ…